ಮುಂಬೈ: ಭಾರತದ ಆರ್ಥಿಕತೆಯ ಶೋಚನೀಯ ಸ್ಥಿತಿಗೆ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾರಣ ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಮನಹೋನ್ ಸಿಂಗ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗಳನ್ನು ನಾನು ನೋಡಿದ್ದೇನೆ. ಆ ವಿಚಾರವಾಗಿ ಟೀಕೆ ಮಾಡಲು ಇಷ್ಟಪಡುವುದಿಲ್ಲ. ಆದರೆ ಕೇಂದ್ರ ಸರ್ಕಾರ ಆರ್ಥಿಕ ಕುಸಿತದ ಸಮಸ್ಯೆಗೆ ಪರಿಹಾರ ಹುಡುಕುವುದರ ಬದಲು ವಿಪಕ್ಷಗಳ ವಿರುದ್ಧ ಆರೋಪ ಮಾಡುತ್ತಿವೆ. ಇದರಿಂದ ದೇಶದ ಆರ್ಥಿಕತೆಯ ಸುಧಾರಣೆ ಆಗುವುದಿಲ್ಲ ಎಂದು ಕುಟುಕಿದ್ದಾರೆ.
Advertisement
Ex-PM Manmohan Singh: Much advertised double engine model of governance on which BJP seeks votes has utterly failed. Maharashtra has faced some of the worst effects of economic slowdown. Manufacturing growth rate of Maharashtra has been declining for 4th consecutive yrs. #Mumbai pic.twitter.com/1Fp4ZYUUWr
— ANI (@ANI) October 17, 2019
Advertisement
ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಆರ್‌ಬಿಐ ಪಿಎಂಸಿ ಬ್ಯಾಂಕಿನ ಬಿಕ್ಕಟ್ಟಿಗೆ ಸೂಕ್ತ ಪರಿಹಾರವನ್ನು ನೀಡಬೇಕು. ಈ ಮೂಲಕ ಬ್ಯಾಂಕ್‍ನಲ್ಲಿ ಹೂಡಿಕೆ ಮಾಡಿರುವ 16 ಲಕ್ಷ ಜನರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
Advertisement
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕತೆ ಅಸಮರ್ಪಕ ನಿರ್ವಹಣೆಗೆ ಮಹಾರಾಷ್ಟ್ರ ಸಾಕ್ಷಿಯಾಗಿದೆ. ಈ ಹಿಂದೆ ಮಹಾರಾಷ್ಟ್ರ ಹೂಡಿಕೆದಾರರನ್ನು ಆಕರ್ಷಿಸುವ ನಂಬರ್ ಒನ್ ರಾಜ್ಯವಾಗಿತ್ತು. ಆದರೆ ಕಳೆದ ಐದು ವರ್ಷದಲ್ಲಿ ಇಲ್ಲಿನ ಅತಿದೊಡ್ಡ ಕಾರ್ಖಾನೆ ಮುಚ್ಚಿಹೋಗಿದೆ. ಪರಿಣಾಮ ಹೂಡಿಕೆದಾರರು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ರಾಜ್ಯವು ಭಾರೀ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.
Advertisement
Former PM Dr Manmohan Singh, in Mumbai, on PMC bank matter: I expect the govt of India, RBI and the govt of Maharashtra to put their head together and provide a credible, pragmatic and effective solution to this case where 16 Lakh depositors are trying for justice. https://t.co/f3m5MFY0Bz
— ANI (@ANI) October 17, 2019
ಸೀತಾರಾಮನ್ ಹೇಳಿದ್ದೇನು?:
ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ ವಿಭಾಗ ಭಾರತದ ಆರ್ಥಿಕ ನೀತಿ ವಿಚಾರದ ಬಗ್ಗೆ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಉಪನ್ಯಾಸ ನೀಡಿದರು. ಈ ವೇಳೆ ಮಾತನಾಡಿ, ಮನಮೋಹನ್ ಸಿಂಗ್ ಮತ್ತು ರಘುರಾಮ್ ರಾಜನ್ ಅವಧಿಯಲ್ಲಿ ಬ್ಯಾಂಕ್‍ಗಳು ದುಸ್ಥಿತಿಗೆ ತಲುಪಿದ್ದವು. ಈಗ ನಮ್ಮ ಸರ್ಕಾರ ಬ್ಯಾಂಕ್‍ಗಳಿಗೆ ಜೀವ ನೀಡಿ ಹೊಸ ಚೈತನ್ಯ ನೀಡುತ್ತಿದೆ ಎಂದು ತಿಳಿಸಿದ್ದರು.
ಆರ್ಥಿಕ ತಜ್ಞರಾಗಿರುವ ರಘುರಾಮ್ ರಾಜನ್ ಮೇಲೆ ನನಗೆ ನನಗೆ ಬಹಳ ಗೌರವವಿದೆ. ದೇಶದ ಆರ್ಥಿಕತೆ ಸದೃಢವಾಗಿದ್ದಾಗ ಅವರು ಆರ್‌ಬಿಐ ಗವರ್ನರ್ ಆಗಿದ್ದರು. ರಾಜನ್ ಗವರ್ನರ್ ಆಗಿದ್ದ ಸಂದರ್ಭದಲ್ಲಿ ಪ್ರಭಾವಿಶಾಲಿ ವ್ಯಕ್ತಿಗಳು ಒಂದು ಫೋನ್ ಕರೆ ಮಾಡಿದರೆ ಸಾಕು ಸಾಲ ಮಂಜೂರಾಗುತಿತ್ತು. ಇದರಿಂದ ಸೃಷ್ಟಿಯಾದ ಸಮಸ್ಯೆಯಿಂದ ಪಾರಾಗಲು ಸಾರ್ವಜನಿಕ ರಂಗದ ಬ್ಯಾಂಕುಗಳು ಸರ್ಕಾರದ ಷೇರುಗಳನ್ನು ಅವಲಂಬಿಸುವ ಅನಿವಾರ್ಯತೆಗೆ ಸಿಲುಕಿದೆ ಎಂದು ಮಾಹಿತಿ ನೀಡಿದ್ದರು.
ನಾನು ಯಾರ ಬಗ್ಗೆಯೂ ಟೀಕೆ ಮಾಡಲು ಈ ವಿಚಾರ ಹೇಳುತ್ತಿಲ್ಲ. ಮನಮೋಹನ್ ಸಿಂಗ್ ಮತ್ತು ರಾಜನ್ ಅವರಿದ್ದ ಸಮಯದಲ್ಲಿ ಬ್ಯಾಂಕುಗಳು ಬಹಳ ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದವು. ಆ ಸಂದರ್ಭದಲ್ಲಿ ನಮಗೆ ಈ ವಿಚಾರಗಳು ತಿಳಿಯುತ್ತಿರಲಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಹಿತಿ ಪ್ರಕಾರ 2012-13ರಲ್ಲಿ ಸಾರ್ವಜನಿಕ ರಂಗದ ಕೆಟ್ಟ ಸಾಲದ ಪ್ರಮಾಣ 9,190 ಕೋಟಿ ರೂ. ಇದ್ದರೆ, 2013-14ರ ವೇಳೆಗೆ ಇದು 2.16 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿತ್ತು.