Connect with us

ಬಿಜೆಪಿಯವರ ಒಳ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತೆ, ಆರು ತಿಂಗಳಲ್ಲಿ ಚುನಾವಣೆ ನಡೆಯುತ್ತೆ: ಶಾಸಕ ಸಂಗಮೇಶ್

ಬಿಜೆಪಿಯವರ ಒಳ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತೆ, ಆರು ತಿಂಗಳಲ್ಲಿ ಚುನಾವಣೆ ನಡೆಯುತ್ತೆ: ಶಾಸಕ ಸಂಗಮೇಶ್

ಶಿವಮೊಗ್ಗ: ಬಿಜೆಪಿಯವರ ಒಳ ಜಗಳದಿಂದಲೇ ಈ ಸರ್ಕಾರ ಬಿದ್ದು ಹೋಗಲಿದ್ದು, ಇನ್ನು 6 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಕೇವಲ 6 ತಿಂಗಳ ಸರ್ಕಾರ, ಇನ್ನು 6 ತಿಂಗಳಲ್ಲಿ ಸರ್ಕಾರ ಪತನವಾಗಲಿದೆ. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ, ಅವರು ಹಣ ಮಾಡುವುದಕ್ಕಾಗಿಯೇ ಅಧಿಕಾರದಲ್ಲಿದ್ದಾರೆ. ಬಿಜೆಪಿ ಶಾಸಕರಲ್ಲಿ ಈಗಾಗಲೇ ಒಳ ಜಗಳ ಆರಂಭವಾಗಿದ್ದು, 2022ರಲ್ಲಿ ಚುನಾವಣೆ ಎದುರಾಗಬಹುದು ಎಂದರು. ಇದನ್ನೂ ಓದಿ: ಸರ್ಕಾರ ರಚನೆಯಾಗೋದಕ್ಕೆ ನನ್ನದೂ ಅಳಿಲು ಸೇವೆ ಇದೆ : ಸಿ.ಪಿ.ಯೋಗೇಶ್ವರ್

ಪೆಟ್ರೋಲ್ ದರ ನೂರು ರೂಪಾಯಿ ದಾಟಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಜನರು ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಈ ಬಿಜೆಪಿಯವರಿಗೆ ಅಧಿಕಾರ ನಡೆಸಿ ಅನುಭವ ಇಲ್ಲ, ಅನುಭವದ ಕೊರತೆ ಇದೆ ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ, ಹಗರಣ ನಡೆದಿಲ್ಲ. ಬದಲಿಗೆ 70 ವರ್ಷ ಅಧಿಕಾರ ನಡೆಸಿದ ಅವಧಿಯಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದೆ. ಆದರೆ ಬಿಜೆಪಿಯವರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಅವರ ಧರ್ಮದ ರಾಜಕಾರಣ ಈಗಾಗಲೇ ಜನರಿಗೆ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪತನವಾಗಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಬಿ.ಕೆ.ಸಂಗಮೇಶ್ ತಿಳಿಸಿದರು.

Advertisement
Advertisement