ಕಲಬುರಗಿ: ಅನ್ನದಾತ ರೈತರ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ರೈತರ ಆದಾಯ ದ್ವಿಗುಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
Advertisement
ನಗರದ ಆಳಂದ ರಸ್ತೆಯಲ್ಲಿರುವ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯದಿಂದ 5.45 ಕೋಟಿ ರೂ. ವೆಚ್ಚದಲ್ಲಿ ಮಹಾವಿದ್ಯಾಲಯದ ವಿಸ್ತರಣಾ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ರೈತರ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿ ಇದೆ. ವಿಧಾನಸೌಧದಲ್ಲಿ ಕೂತು ಕೆಲಸ ಮಾಡುವ ಸರ್ಕಾರ ಇದಲ್ಲ, ರೈತರ ಬಾಗಿಲಿಗೆ, ಹೊಲಗಳಿಗೆ ಸರ್ಕಾರ ಹೋಗಲಿದೆ ಎಂದ ಅವರು ಮುಂದಿನ ದಿನದಲ್ಲಿ ಕಲಬುರಗಿಗೆ ಬಂದು ಒಂದು ರೈತರೊಂದಿಗಿದ್ದು, ಅವರ ಸಂಕಷ್ಟಗಳನ್ನು ಆಲಿಸುವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಾದಯಾತ್ರೆಯನ್ನು ತಕ್ಷಣವೇ ನಿಲ್ಲಿಸಿ- ಸರ್ಕಾರ ಆದೇಶ
Advertisement
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿದ ಕೂಡಲೇ ಜಾತಿ-ಧರ್ಮ ನೋಡದೆ ರೈತರ ಮಕ್ಕಳ ಉನ್ನತ ವ್ಯಾಸಂಗ ಮಾಡಬೇಕು ಎಂಬ ಕಾರಣದಿಂದ 2,500 ರೂ. ಗಳಿಂದ 11,500 ರೂ.ವರೆಗೆ ವಿದ್ಯಾರ್ಥಿ ವೇತನ ಘೋಷಿಸಿದ್ದಾರೆ. ಇದರ ಜೊತೆಗೆ ಇತ್ತೀಚೆಗೆ 8 ರಿಂದ 10ನೇ ತರಗತಿ ಓದುವ ರೈತರ ಹೆಣ್ಣು ಮಕ್ಕಳಿಗೆ ವಾರ್ಷಿಕ 3,000 ರೂ. ವಿದ್ಯಾರ್ಥಿ ವೇತನವು ಜಾತಿಗೊಳಿಸಲಾಗಿದೆ. ಒಟ್ಟಾರೆಯಾಗಿ ರೈತಾಪಿ ಕುಟುಂಬವನ್ನು ಮೇಲಕ್ಕೆತ್ತುವ ಸರ್ವ ಪ್ರಯತ್ನ ನಡೆದಿದೆ ಎಂದು ಅಭಿಪ್ರಾಯಪಟ್ಟರು.
Advertisement
Advertisement
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಮಾತನಾಡಿ, ಕೃಷಿ ಮಹಾವಿದ್ಯಾಲಯಕ್ಕೆ ಮುಖ್ಯ ರಸ್ತೆಯಿಂದ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕೆಕೆಅರ್‌ಡಿಬಿ ಯಿಂದ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪಾದಯಾತ್ರೆ ಕುರಿತು ನ್ಯಾಯಾಲಯ ನೀಡುವ ಆದೇಶವನ್ನು ಪಾಲನೆ ಮಾಡುತ್ತೇವೆ: ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಂಸದ ಡಾ. ಉಮೇಶ್, ಜಿ. ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ್ ವಿಧಾನ ಪರಿಷತ್ ಶಾಸಕರಾದ ಡಾ. ಬಿ.ಜಿ.ಪಾಟೀಲ್, ಶಶೀಲ್ ಜಿ. ನಮೋಶಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಉಪಸ್ಥಿತರಿದ್ದರು.