ಬೆಂಗಳೂರು: ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಬಿಜೆಪಿ (BJP) ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಹೈಕೋರ್ಟ್ (High Court) ಸಿಎಂ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ (CM Siddaramaiah) ರಾಜೀನಾಮೆ ನೀಡಬೇಕು ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ಆಪ್ತರ ಮಾತು ಕೇಳಿ ಸಿಎಂ ಕೆಟ್ಟರು, ಸತ್ಯಕ್ಕೆ ಜಯ ಸಿಕ್ಕಿದೆ : ಶಾಸಕ ಶ್ರೀವತ್ಸ
ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬಿಜೆಪಿಯವರು ಹಗಲು ದರೋಡೆ ಮಾಡಿದ್ದಾರೆ. ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು. ಅಷ್ಟು ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದರು.
ಸಿಎಂ ಯಾಕೆ ರಾಜೀನಾಮೆ ಕೊಡಬೇಕು? ನಾವು ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ಹೋರಾಟಕ್ಕೆ ಹಲವು ಅವಕಾಶಗಳಿವೆ. ಸರ್ಕಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ನಾವು ಉತ್ತಮ ಕೆಲಸ ಮಾಡಿದ್ದೇವೆ. ಜನ ನಮ್ಮ ಜೊತೆ ಇದ್ದಾರೆ, ನಾವು ಮೇಲ್ಮನವಿ ಹಾಕುತ್ತೇವೆ. ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ ಎಂದು ಹೇಳಿದರು.ಇದನ್ನೂ ಓದಿ: ಹಿಂದಿ ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಾರಾ ಮಹೇಶ್ ಬಾಬು ಸಂಬಂಧಿ?