– ರಾಷ್ಟ್ರ ರಾಜಧಾನಿಯ ನೂತನ ಸಾರಥಿ ಯಾರು?
– 14 ರಾಜ್ಯಗಳಲ್ಲಿ ಬಿಜೆಪಿಗೆ ಸ್ವಂತ ಬಲದ ಅಧಿಕಾರ
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ (Delhi Election Results) ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ (BJP) ಅಧಿಕಾರಕ್ಕೇರಿದೆ. ಆದ್ರೆ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದ್ದರೆ, ʻಕೈʼ ಪಾಳಯ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ.
Advertisement
ಚುನಾವನೆಯಲ್ಲಿ ಬಹುಮತ ಪಡೆದ ಬೆನ್ನಲ್ಲೇ ರಾಜಧಾನಿಯ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಈ ನಡುವೆ ಸರ್ಕಾರ ರಚನೆ (Delhi Government Formation) ಇನ್ನೂ ನಾಲ್ಕೈದು ದಿನ ವಿಳಂಭವಾಗುವ ಸಾಧ್ಯತೆಗಳಿವೆ. ಫೆ.15ರ ವರೆಗೆ ಸರ್ಕಾರ ರಚನೆ ಇಲ್ಲ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಪಾಕ್ ಮೈದಾನದಲ್ಲಿ ಫೀಲ್ಡಿಂಗ್ ವೇಳೆ ಹಣೆಗೆ ಬಡಿದ ಚೆಂಡು – ರಕ್ತ ಸೋರುತ್ತಲೇ ಹೊರನಡೆದ ರಚಿನ್ ರವೀಂದ್ರ
Advertisement
ಹೌದು. ಇದೇ ಫೆ.12-13ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ (Donald Trump) 2ನೇ ಅವಧಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ. ಪ್ರವಾಸ ಮುಗಿಸಿ ಫೆ.14ರಂದು ಮೋದಿ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಪ್ರಮಾಣ ವಚನ ಸಮಾರಂಭ ಮುಂದೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Advertisement
Advertisement
ಬಿಜೆಪಿಯು ಪ್ರಮಾಣ ವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ನಿರ್ಧರಿಸಿದೆ. ಈ ಸಮಾರಂಭಕ್ಕೆ ಎಲ್ಲಾ ಎನ್‌ಡಿಎ ನಾಯಕರು ಹಾಗೂ ಸಿಎಂಗಳನ್ನ ಆಹ್ವಾನಿಸಲಾಗುತ್ತದೆ. ಹೀಗಾಗಿಯೇ ಪ್ರಧಾನಿ ಮೋದಿ ಅಮೆರಿಕ ಪ್ರವಾಸದ ಬಳಿಕವೇ ದೆಹಲಿಯಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮರಳು ತುಂಬಿದ್ದ ಲಾರಿ ಪಲ್ಟಿ – ರಸ್ತೆಬದಿ ಕೆಲಸ ಮಾಡ್ತಿದ್ದ ಮೂವರು ಮಹಿಳೆಯರು, ಮಗು ದುರ್ಮರಣ
ದೆಹಲಿಯ ನೂತನ ನಾಯಕ ಯಾರು?
ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ, ಮುಖಂಡರಾದ ರಮೇಶ್ ಬಿಧೂರಿ, ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್, ಕೈಲಾಶ್ ಗೆಹ್ಲೋಟ್ ಹಾಗೂ ಕಪಿಲ್ ಮಿಶ್ರಾ ಸೇರಿ ಹಲವರು ಸಿಎಂ ರೇಸ್‌ನಲ್ಲಿದ್ದಾರೆ.
21 ರಾಜ್ಯಗಳಲ್ಲಿ ಈಗ ಬಿಜೆಪಿ ಆಳ್ವಿಕೆ:
ದೆಹಲಿ ಗೆಲುವಿನೊಂದಿಗೆ ಬಿಜೆಪಿ ಮೈತ್ರಿಕೂಟ ಆಳ್ವಿಕೆಯಲ್ಲಿರುವ ರಾಜ್ಯಗಳ ಸಂಖ್ಯೆ 21ಕ್ಕೆ ಏರಿದೆ. ಈ ಪೈಕಿ 14 ರಾಜ್ಯಗಳಲ್ಲಿ ಬಿಜೆಪಿ ಸ್ವತಂತ್ರ ಬದಲ್ಲಿ ಅಧಿಕಾರದಲ್ಲಿದ್ದರೆ, 7 ರಾಜ್ಯಗಳಲ್ಲಿ ಮೈತ್ರಿಯೊಂದಿಗೆ ಗದ್ದುಗೆ ಹಿಡಿದೆ. ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ – ಬೆಂಗಳೂರು ತಲುಪಿದ 2ನೇ ಡ್ರೈವರ್‌ಲೆಸ್ ಮೆಟ್ರೋ