ಬೆಂಗಳೂರು: ಸೈಲೆಂಟ್ ಸುನಿಲ್ (Silent Sunila) ಬಿಜೆಪಿ ಸೇರ್ಪಡೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
`ಸೈಲೆಂಟ್ ಸುನೀಲ’ನ ಜೊತೆ ಬಿಜೆಪಿ (BJP) ನಾಯಕರು ಎಂಬ ಕುರಿತು ಪಬ್ಲಿಕ್ ಟಿವಿ ನಿರಂತರ ವರದಿ ಮಾಡಿದ ಬಳಿಕ ಬಿಜೆಪಿ ಎಚ್ಚೆತ್ತಿದೆ. ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ (Nalin Kumar Kateel) , ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲ್‍ನನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್
ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.
ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇತ್ತ ಫೈಟರ್ ರವಿ ಪಕ್ಷ ಸೇರ್ಪಡೆ ಬಗ್ಗೆ ಕಟೀಲ್ ಮೌನವಹಿಸಿದ್ದಾರೆ.