– ಡಿಕೆಶಿ ತಾವು ಮಾಡಿದ್ದು ಅಂತ ಜಂಬ ಕೊಚ್ಚಿಕೊಳ್ತಿದ್ದಾರೆ
ಬೆಂಗಳೂರು: ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಯ ಕ್ರೆಡಿಟ್ ಬಿಜೆಪಿಗೆ (BJP) ಸಲ್ಲಬೇಕು ಎಂದು ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ (R Ashok) ತಿಳಿಸಿದರು.
Advertisement
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿ.ಕೆ.ಹಳ್ಳಿಯಲ್ಲಿ ಇವತ್ತು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳು ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಯನ್ನು ಉದ್ಘಾಟಿಸಿದ್ದಾರೆ. ತಾವೇ ಮುತುವರ್ಜಿ ವಹಿಸಿ ಹಣ ಬಿಡುಗಡೆ ಮಾಡಿ, ಕ್ರಿಯಾ ಯೋಜನೆ ಮಾಡಿ ಕೆಲಸ ಅನುಷ್ಠಾನಕ್ಕೆ ತಂದಿರುವುದಾಗಿ ಜಂಬ ಕೊಚ್ಚಿಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಅಮೆರಿಕದಲ್ಲಿ ಕಾರು ಅಪಘಾತ – ಆಂಧ್ರಪ್ರದೇಶದ ಮೂವರು ಸೇರಿ, ಐವರು ಭಾರತೀಯರು ಸಾವು
Advertisement
Advertisement
ಅವರೇನೇ ಹೇಳಿದರೂ ಸರ್ಕಾರಿ ದಾಖಲೆಗಳು ಮಾತನಾಡುತ್ತವೆ. 2018 ಜನವರಿ 24ರಂದು ಬಿಜೆಪಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ 5,500 ಕೋಟಿ ಮೊತ್ತದ ಸಾಲದ ಒಪ್ಪಂದಕ್ಕೆ ಸಹಿ ಹಾಕಿದ್ದರು. 90 ತಿಂಗಳೊಳಗೆ ಯೋಜನೆ ಪೂರ್ಣಗೊಳಿಸಲು ಷರತ್ತು ವಿಧಿಸಲಾಗಿತ್ತು. ಓರಿಯೆಂಟಲ್ ಕನ್ಸಲ್ಟೇಶನ್ ಮೊದಲಾದ ಕಂಪನಿಗಳಿಗೆ ಯೋಜನೆ ನಿರ್ವಹಿಸಲು ನೀಡಲಾಗಿತ್ತು ಎಂದರು. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್ ಅನುಮೋದನೆ
Advertisement
ಯೋಜನೆ ಪ್ರಾರಂಭವಾದ ದಿನ 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಗುತ್ತಿಗೆ ಪ್ಯಾಕೇಜ್ ಮಾಡಿದ್ದು, ಪ್ಯಾಕೇಜ್ 2ರಲ್ಲಿ ನಿತ್ಯ 77.5 ಕೋಟಿ ಲೀಟರ್ ನೀರು ಶುದ್ಧೀಕರಣ ಘಟಕ, ಪ್ಯಾಕೇಜ್ 3ರಲ್ಲಿ ಟಿ.ಕೆ ಹಳ್ಳಿ ಪಂಪಿಂಗ್ ಸ್ಟೇಶನ್, ಪ್ಯಾಕೇಜ್ 4ರಲ್ಲಿ ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ 2 ಪಂಪಿಂಗ್ ಸ್ಟೇಶನ್ ನಿರ್ಮಾಣಕ್ಕೆ, ಟಿಕೆಹಳ್ಳಿ, ಹಾರೋಹಳ್ಳಿವರೆಗೂ ಪೈಪ್‌ಲೈನ್, ಹಾರೋಹಳ್ಳಿಯಿಂದ ವಾಜರಹಳ್ಳಿವರೆಗೂ ಪೈಪ್‌ಲೈನ್, ನಗರದ ಪಶ್ಚಿಮ ಭಾಗದಲ್ಲಿ ಪೈಪ್‌ಲೈನ್, ನೆಲಮಟ್ಟದ ಜಲಾಗಾರ, 13ನೆಯದು ಪಶ್ಚಿಮ ಭಾಗದಲ್ಲಿ ನೆಲಮಟ್ಟದ ಜಲಾಗಾರ ನಿರ್ಮಿಸಲು ಉದ್ದೇಶಿಸಲಾಗಿತ್ತು. ಇಷ್ಟಕ್ಕೂ ಹಣ ಪಡೆದು, ಸಾಲ ಪಡೆದು ಜಪಾನ್‌ನ ಕಂಪನಿ, ಓರಿಯೆಂಟಲ್ ಮೊದಲಾದ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ಯೋಜನೆಗಳನ್ನು ಕೂಡ ಪ್ರಾರಂಭ ಮಾಡಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ – ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ
ಬಳಿಕ ಬಸವರಾಜ ಬೊಮ್ಮಾಯಿಯವರ ಸರ್ಕಾರ ಬಂತು. ನಾನು ಅದರಲ್ಲಿ ಸಚಿವನಾಗಿದ್ದೆ. ಶೇ 80ರಷ್ಟು ಕೆಲಸವನ್ನು ನಾವೇ ಮಾಡಿದ್ದು. ಇವರು ಬಂದು ಒಂದು ವರ್ಷ ಆಗಿದೆ. ಅಲ್ಲಿ ನೆರೆ ಬಂದಾಗ ನಾನು, ಬೊಮ್ಮಾಯಿಯವರು ಭೇಟಿ ಕೊಟ್ಟಿದ್ದೆವು. ಪ್ಯಾಕೇಜ್‌ಗೆ ಡಿಪಿಆರ್ ಮಾಡಿದ್ದು ಯಾರು? ಹಣ ಹೊಂದಿಸಿ ಕೊಟ್ಟದ್ದು ಯಾರು? ಯಾರ ಸರ್ಕಾರದಲ್ಲಿ ಕೆಲಸ ಆರಂಭವಾಯಿತು ಎಂಬುದನ್ನೆಲ್ಲ ಮುಚ್ಚಿಟ್ಟಿದ್ದಾರೆ. ದೇವರನ್ನು ಕೂರಿಸಿದ್ದು ನಾವು. ಹೋಮ ಹವನ ಮಾಡಿದ್ದು ನಾವು. ಮಂಗಳಾರತಿ ಟೈಮಿನಲ್ಲಿ ಇವರು ಬಂದು ನಮ್ಮದು ಎಂದಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ
110 ಹಳ್ಳಿಗಳನ್ನು ಪಾಲಿಕೆಗೆ ನಾವೇ ಸೇರಿಸಿದ್ದು, ಕಾಂಗ್ರೆಸ್ಸಿಗರು ಸೇರಿಸಿಲ್ಲ. ನಾನು ಆಗ ಆರೋಗ್ಯ ಸಚಿವ ಮತ್ತು ಬೆಂಗಳೂರು ಇನ್ ಚಾರ್ಜ್ ಸಚಿವನಾಗಿದ್ದೆ. ಕನ್ನಡ ಉಳಿಯಲು ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕೆಂಬ ಉದ್ದೇಶ ಅದರ ಹಿಂದಿತ್ತು ಎಂದು ನುಡಿದರು. ಇದನ್ನೂ ಓದಿ: ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ