ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ರಾಜ್ಯದಲ್ಲಿ ಬಿಜೆಪಿ (BJP) ಮುನ್ನಡೆ ಕಾಯ್ದುಕೊಂಡಿದೆ.
ರಾಜ್ಯದ 60 ಸ್ಥಾನಗಳ ಪೈಕಿ ಬಿಜೆಪಿ 47 ರಲ್ಲಿ ಮುಂದಿದೆ. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮೂರನೇ ಅವಧಿಗೆ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್!
Advertisement
Advertisement
ಅರುಣಾಚಲ ಪ್ರದೇಶದ 50 ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು ಭಾರೀ ಭದ್ರತೆಯಲ್ಲಿ ಆರಂಭವಾಗಿದೆ. ಆಡಳಿತಾರೂಢ ಬಿಜೆಪಿ ಈಗಾಗಲೇ 10 ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ.
Advertisement
ರಾಜ್ಯದಾದ್ಯಂತ ಭಾರೀ ಮಳೆಯ ನಡುವೆ 24 ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 6 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಪವನ್ ಕುಮಾರ್ ಸೇನ್ ತಿಳಿಸಿದ್ದಾರೆ. ಇದನ್ನೂ ಓದಿ: ಅಬ್ಕಿ ಬಾರ್ ಚಾರ್ ಸೌ ಪಾರ್ – ಎನ್‌ಡಿಎ 400ರ ಗಡಿ ದಾಟುತ್ತೆ ಎಂದ ಟುಡೇಸ್ ಚಾಣಕ್ಯ
Advertisement
ಖೋನ್ಸಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ವಂಗ್ಲಾಮ್ ಸವಿನ್ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕಮ್ರಾಂಗ್ ತೇಸಿಯಾ ಅವರನ್ನು 2,216 ಮತಗಳ ಅಂತರದಿಂದ ಸೋಲಿಸಿದ್ದಾರೆ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ. ಸವಿನ್ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಏಪ್ರಿಲ್ 19 ರಂದು ಮೊದಲ ಹಂತದ ಚುನಾವಣೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದವು. ಈಶಾನ್ಯ ರಾಜ್ಯವು 60 ವಿಧಾನಸಭಾ ಸ್ಥಾನಗಳನ್ನು ಮತ್ತು ಎರಡು ಲೋಕಸಭಾ ಸ್ಥಾನಗಳನ್ನು ಹೊಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಅಂದಾಜು 82.71 % ರಷ್ಟು ಮತದಾರರು ಮತ ಚಲಾಯಿಸಿದ್ದರೆ, ರಾಜ್ಯದ ಎರಡು ಲೋಕಸಭಾ ಸ್ಥಾನಗಳಿಗೆ 77.51 % ರಷ್ಟು ಮತದಾನವಾಗಿದೆ.