ಅಗರ್ತಲಾ: 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿಗೆ (BJP) ಪ್ರತಿ ಸ್ಪರ್ಧಿಯೇ ಇಲ್ಲ. ದೇಶದ ಜನತೆ ಪೂರ್ಣ ಹೃದಯದಿಂದ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ. ಅವರು ಯಾವುದೇ ಪಕ್ಷಕ್ಕೆ ವಿರೋಧ ಪಕ್ಷದ ಹಣೆಪಟ್ಟಿ ನೀಡಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ
Advertisement
Advertisement
ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ಸೇರಿದಂತೆ ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಆಂತರಿಕ ಭದ್ರತೆಯನ್ನು ಹೆಚ್ಚಿಸಲು ಮತ್ತು ರಕ್ಷಣೆಯಲ್ಲಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ದೇಶವು ವೇಗವಾಗಿ ಬೆಳೆಯುತ್ತಿದೆ ಎಂದು ಶಾ ಹೇಳಿದ್ದಾರೆ. ಇದನ್ನೂ ಓದಿ: ಭದ್ರಾವತಿ VISL ಮುಚ್ಚುತ್ತೇವೆ: ಕೇಂದ್ರದಿಂದ ಅಧಿಕೃತ ಉತ್ತರ
Advertisement
ಎಂಟು ವರ್ಷಗಳ ಅವಧಿಯಲ್ಲಿ ದೇಶದ 60 ಕೋಟಿ ಬಡವರ ಜೀವನಮಟ್ಟವನ್ನು ಸುಧಾರಿಸುವಲ್ಲಿ ಯಶಸ್ವಿಯಾಗಿದ್ದೇವೆ. ರೈಲ್ವೆಯಲ್ಲಿ ಪ್ರಮುಖ ಬದಲಾವಣೆಗಳಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ನೀತಿ ಇದೆ. ಹೊಸ ನೀತಿಯೊಂದಿಗೆ ನಾವು ಡ್ರೋನ್ ವಲಯದಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಮಾತನಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k