ಕೋಲಾರ: ಹೊಸ ಪಕ್ಷ ಕಟ್ಟಿದವರು ಈಗ ಯಾರೂ ಉಳಿದಿಲ್ಲ. ಹಾಗೆಯೇ ಎಷ್ಟು ಮಂದಿ ಜನಾರ್ದನ (Janardhana Reddy) ಬಂದರೂ ಬಿಜೆಪಿಗೆ (BJP) ಯಾವುದೇ ತೊಂದರೆ ಆಗಲ್ಲ ಎಂದು ಸಚಿವ ಮುನಿರತ್ನ (Muniratna) ತಿರುಗೇಟು ನೀಡಿದ್ದಾರೆ.
ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾರಪ್ಪ, ದೇವರಾಜ ಅರಸು ಸೇರಿದಂತೆ ಹಲವು ನಾಯಕರು ಪಕ್ಷ ಕಟ್ಟಿದ್ರು, ಅವು ಯಾವುದೂ ಈಗ ಕಣ್ಣಿಗೆ ಕಾಣಿಸ್ತಿಲ್ಲ. ಜನಾರ್ದನ ರೆಡ್ಡಿ ಅವರು ಗಂಗಾವತಿಗೆ ಮಾತ್ರ ಅಭ್ಯರ್ಥಿ ಆಗುತ್ತೇನೆ ಅಂತಾ ಹೇಳಿಕೊಂಡು ಬಂದಿದ್ದರು. ಈಗ ಪಕ್ಷ ಕಟ್ಟುತ್ತೇನೆ ಅಂತಾರೆ. ಎಷ್ಟು ಮಂದಿ ಜನಾರ್ದನ ಬಂದ್ರೂ ಬಿಜೆಪಿಗೆ ಸಣ್ಣ ತೊಂದರೆಯೂ ಆಗೊಲ್ಲ. ಇನ್ನೂ ಇಪ್ಪತ್ತು ಮಂದಿ ಪಕ್ಷ ಕಟ್ಟಿದರೂ ನಮ್ಮ ಪಕ್ಷಕ್ಕೆ ಏನೂ ಆಗೋಲ್ಲ ಎಂದು ಬೀಗಿದ್ದಾರೆ.
ಜನಾರ್ದನ ರೆಡ್ಡಿ ವಿಚಾರದಲ್ಲಿ ಕೇಂದ್ರದ ನಾಯಕರ ತೀರ್ಮಾನ ಇರುತ್ತದೆ. ರೆಡ್ಡಿಯವರು ಆತುರದ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜಕಾರಣಿಗಳಿಗೆ ತಾಳ್ಮೆ ಬಹಳ ಮುಖ್ಯ, ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡಬೇಕಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಕೋಲಾರವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ: ಮುನಿರತ್ನ
ಕೆಎಂಎಫ್ ವಿಲೀನ ವಿಚಾರದಲ್ಲಿ ಕಾಂಗ್ರೆಸ್ (Congress) ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾಡಲು ಕೆಲಸ ಇಲ್ಲ. ಅಮುಲ್ (Amul) ಜೊತೆ ಕೆಎಂಎಫ್ (KMF) ವಿಲೀನದ ಬಗ್ಗೆ ಈವರೆಗೆ ಯಾವುದೇ ಚರ್ಚೆ ಆಗಿಲ್ಲ. ಸಭೆ ನಡೆದಿಲ್ಲ. ಇದು ಕಾಂಗ್ರೆಸ್‌ನವರ ಪಿತೂರಿ ಎಂದಿದ್ದಾರೆ. ಇದನ್ನೂ ಓದಿ: ನಾಟಕದಲ್ಲಿ ಸಿದ್ದರಾಮಯ್ಯಗೆ ಅವಮಾನ- ರಂಗಾಯಣದ ವಿರುದ್ಧ ಅಭಿಮಾನಿಗಳ ಆಕ್ರೋಶ
ನೋಟ್ ಬ್ಯಾನ್ (Note Ban) ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಸರಿಯಾಗಿದೆ. ಜನಗಳೇನೂ ದಂಗೆ ಎದ್ದಿಲ್ಲ. ಅಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತೆಗೆದುಕೊಂಡ ತೀರ್ಮಾನ ಸರಿ ಇದೆ. ಜನ ಅದಕ್ಕೆ ಹೊಂದಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇನ್ನೂ ಮುಂದಿನ ಸರ್ಕಾರ ನಮ್ಮ ಪಕ್ಷದ್ದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.