ಬೆಂಗಳೂರು: ಶನಿವಾರ ವಿಧಾನ ಸಭೆಯಲ್ಲಿ ಶಾಸಕರ ಪ್ರಮಾಣ ವಚನ ಸ್ವೀಕಾರ ಒಂದು ಕಡೆ ನಡೆದಿದ್ರೆ, ಇತ್ತ ಕಾಂಗ್ರೆಸ್ ತಮ್ಮ ಶಾಸಕರಿಗೆ ಬಿಜೆಪಿ ನಾಯಕರು ಕರೆ ಮಾಡಿ ಆಫರ್ ನೀಡಿರುವ ಆಡಿಯೋ ಟೇಪ್ ಗಂಟೆಗೆ ಒಂದರಂತೆ ಬಿಡುಗಡೆಯಾಗುತಿತ್ತು. ಈ ಆಡಿಯೋಗಳ ಪೈಕಿ ನನ್ನ ಪತ್ನಿಗೆ ಕರೆ ಮಾಡಿ ಆಫರ್ ನೀಡಿದ್ದಾರೆ ಎನ್ನಲಾದ ಟೇಪ್ ನಕಲಿ ಎಂದು ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಆಪ್ತ ಎಂಎಲ್‍ಸಿ ಪುಟ್ಟಸ್ವಾಮಿ ಹಾಗೂ ಪುತ್ರ ವಿಜಯೇಂದ್ರ ಇಬ್ಬರೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಆಫರ್ ನೀಡಿದೆ ಎನ್ನಲಾದ ಆಡಿಯೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು.
Advertisement
ಈ ಆಡಿಯೋಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಿವರಾಮ್ ಹೆಬ್ಬಾರ್, ಆ ಆಡಿಯೋದಲ್ಲಿರುವುದು ನನ್ನ ಪತ್ನಿಯ ಧ್ವನಿ ಅಲ್ಲ. ಈ ಆಡಿಯೋ ಟೇಪ್ ಫೇಕ್ ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೈ ಶಾಸಕನ ಪತ್ನಿಗೆ ಕರೆ: ಪುಟ್ಟಸ್ವಾಮಿಯಿಂದ 15 ಕೋಟಿ ಆಫರ್ – ಆಡಿಯೋ
Advertisement
ಫೇಸ್‍ಬುಕ್ ಪೋಸ್ಟ್ ನಲ್ಲಿ ಏನಿದೆ?
ಮಾನ್ಯರೇ,
ಇವತ್ತು ನ್ಯೂಸ್ ಚಾನಲ್ ಗಳಲ್ಲಿ ನನ್ನ ಪತ್ನಿಯೊಂದಿಗೆ ಬಿಜೆಪಿಯವರು ನಡೆಸಿದ್ದಾರೆ ಎನ್ನುವ ಟೇಪ್ ಬಿಡುಗಡೆ ವಿಷಯ, ಸದನದಲ್ಲಿದ್ದ ನನಗೆ ತಡವಾಗಿ ಮಾಹಿತಿ ಬಂತು. ಇದು ನನ್ನ ಹೆಂಡತಿಯ ಧ್ವನಿಯೂ ಅಲ್ಲ ಮತ್ತು ನನ್ನ ಹೆಂಡತಿಗೆ ಯಾರ ಫೋನ್ ಕರೆ ಬಂದೂ ಇಲ್ಲ. ರಾಜಕೀಯ ಕಾರಣಕ್ಕಾಗಿ ಈ ರೀತಿ ಸುಳ್ಳು ಟೇಪ್ ಗಳನ್ನು ಯಾರೇ ಬಿಡುಗಡೆ ಮಾಡಿದರೂ ಅದಕ್ಕೆ ನನ್ನ ದಿಕ್ಕಾರ.
Advertisement
ಈ ಆಡಿಯೋ ಟೇಪ್ ಫೇಕ್…. ಇದನ್ನು ಖಂಡಿಸುತ್ತೇನೆ. ನನ್ನ ಕ್ಷೇತ್ರದ ಜನರು ಮತ್ತೊಮ್ಮೆ ಸೇವೆ ಮಾಡಲು ನನಗೆ ಅವಕಾಶ ಕೊಟ್ಟಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು. ನನ್ನ ಜನಪರ ಕೆಲಸಗಳು ಮುಂದುವರಿಯಲಿದೆ.
Advertisement
ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿರುವ ಶಾಸಕರು, ಸದ್ಯ ನಾನು ಬೆಂಗಳೂರಿನಲ್ಲಿದ್ದೇನೆ. ನನ್ನ ಅಧಿಕೃತ ಫೇಸ್‍ಬುಕ್ ಪೇಜ್‍ನ್ನು ಪುತ್ರ ನಿರ್ವಹಣೆ ಮಾಡ್ತಾನೆ. ನನ್ನ ಪೇಜ್‍ನಲ್ಲಿ ಬರೆದುಕೊಂಡಿರುವ ಮಾಹಿತಿಗಳೆಲ್ಲವೂ ಸತ್ಯ ಅಂತಾ ತಿಳಿಸಿದ್ದಾರೆ.
ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರಿಗೆ ಯಡಿಯೂರಪ್ಪ, ಶ್ರೀರಾಮುಲು ಮತ್ತು ಮುರಳೀಧರ್ ರಾವ್ ಆಫರ್ ನೀಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್‍ಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ಆಡಿಯೋ ಕ್ಲಿಪ್‍ಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು ಅದು ನಮ್ಮ ಧ್ವನಿಯೇ ಅಲ್ಲ. ತಂತ್ರಜ್ಞಾನ ಮತ್ತು ಮಿಮಿಕ್ರಿ ಕಲಾವಿದರಿಂದ ಮಾಡಿಸಿರುವ ಸಾಧ್ಯತೆಗಳಿವೆ ಅಂತಾ ಎಲ್ಲ ಆರೋಪಗಳನ್ನು ನಿರಾಕರಣೆ ಮಾಡಿದ್ದಾರೆ.
https://twitter.com/ShobhaBJP/status/997776225207648256