ರಾಯ್ಪುರ: ಕೋಮುವಾದ ಮತ್ತು ಮತಾಂತರ. ಬಿಜೆಪಿ ಬೇಕಿರುವುದು ಇವೆರಡೆ ವಿಚಾರ ಎಂದು ಛತ್ತೀಸ್ಗಢ (Chhattisgarh CM) ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರಲ್ಲಿ (BJP) ಕೇವಲ 2 ವಿಷಯಗಳಿವೆ. ಕೋಮುವಾದ ಮತ್ತು ಧಾರ್ಮಿಕ ಮತಾಂತರ. ಸಮುದಾಯಗಳ ನಡುವೆ ಜಗಳ ತಂದಿಡುತ್ತಾರೆ. ಅವರು ಯಾವುದೇ ಕೆಲಸ ಮಾಡುವುದಿಲ್ಲ. ಆದರೆ ಜನರಲ್ಲಿ ದ್ವೇಷ ತಂದಿಟ್ಟು ಮತ ಗಳಿಸುತ್ತಾರೆ. ಅವರದ್ದು ದ್ವೇಷ, ಹಿಂಸಾಚಾರದ ಮನೋಭಾವ ಎಂದು ಬಸ್ತಾರ್ನಲ್ಲಿ ನಡೆದ ಸಭೆಯೊಂದರಲ್ಲಿ ಬಿಜೆಪಿ ವಿರುದ್ಧ ಸಿಎಂ ಹರಿಹಾಯ್ದರು. ಇದನ್ನೂ ಓದಿ: ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ತಲೆ ಎತ್ತಲಿದೆ ಶ್ರೀರಾಮನ ಮೂರ್ತಿ
Advertisement
Advertisement
ಛತ್ತೀಸ್ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯೊಂದಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
Advertisement
ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಮುಖ ಪಾತ್ರ ವಹಿಸಿವೆ. ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ. ಇದನ್ನೂ ಓದಿ: ಕರ್ನಾಟಕ ಆಧುನಿಕ ಉದ್ಯಮದ ತೊಟ್ಟಿಲು – ರಾಜ್ಯೋತ್ಸವಕ್ಕೆ ಶುಭಕೋರಿದ ಮೋದಿ, ಸಿಎಂ
Advertisement
ಮುಂಬರುವ 2024 ರ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ಆಡಳಿತದ ರಾಜ್ಯದಿಂದ ಅಧಿಕಾರವನ್ನು ಕಸಿದುಕೊಳ್ಳುವ ಗುರಿಯನ್ನು ಬಿಜೆಪಿ ಹೊಂದಿದೆ.
Web Stories