ಬೆಂಗಳೂರು: ಸೇನಾ ಕಾರ್ಯಾಚರಣೆಯನ್ನು ಲೋಕಸಭೆ ಚುನಾವಣೆಯ ರಾಜಕಾರಣಕ್ಕೆ ಲಿಂಕ್ ಮಾಡಿದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಹಾಗೂ ಆರ್ಎಸ್ಎಸ್ ಸಖತ್ ಕ್ಲಾಸ್ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಯಡಿಯೂರಪ್ಪ ಹೇಳಿಕೆಯಿಂದ ರಾಷ್ಟ್ರಮಟ್ಟದಲ್ಲಿ ಮುಜುಗರಕ್ಕೊಳಗಾದ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ಹಾಗೂ ಆರ್ಎಸ್ಎಸ್, ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದ ಬಿಜೆಪಿ ನಾಯಕರು ಸೇನಾ ಕಾರ್ಯಾಚರಣೆಯನ್ನು ರಾಜಕೀಯಕ್ಕೆ ಲಿಂಕ್ ಮಾಡಬಾರದು. ಯಡಿಯೂರಪ್ಪ ಹೇಳಿಕೆಯಿಂದ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಬೇಕೇ ಹೊರತು, ಹೆಚ್ಚು ಬೆಳೆಸಬಾರದು ಅಂತ ಸೂಚನೆ ರವಾನಿಸಿದೆಯಂತೆ. ಅಷ್ಟೇ ಅಲ್ಲದೆ ಹೇಳಿಕೆಯ ಬಗ್ಗೆ ಅಗತ್ಯವಾದ ಸ್ಪಷ್ಟನೆ ನೀಡಿ ಸುಮ್ಮನಾಗುವಂತೆ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:ರಾಜಕೀಯ ಲಾಭ ಕಾಣುತ್ತಿರುವ ಬಿಎಸ್‍ವೈ ಹೇಳಿಕೆಯಿಂದ ಸಂಶಯ- ಸಿದ್ದರಾಮಯ್ಯ
Advertisement
Advertisement
ಬಿಎಸ್‍ವೈ ಹೇಳಿದ್ದೇನು..?
ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದು ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ ಹೇಳಿದ್ದರು. ಇದನ್ನೂ ಓದಿ:ಸೈನಿಕರ ವಿಚಾರ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ: ಬಿಎಸ್‍ವೈ
Advertisement
My statement is being reported out of context. I said that ‘situation favourable for BJP’ which i am saying for last couple of months. This is not first time that i said BJP in Karnataka will win minimum 22 seats under the able leadership of Modi ji.
— B.S.Yediyurappa (@BSYBJP) February 28, 2019
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv