ಬೆಂಗಳೂರು: ಬಿಜೆಪಿಯಲ್ಲಿ (BJP) ವಿಪಕ್ಷ ನಾಯಕರ ಆಯ್ಕೆಗೆ ಭಾರೀ ಕಸರತ್ತು ನಡೆದಿದೆ. ಈ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಂದು ದೆಹಲಿಗೆ ತೆರಳಲಿದ್ದಾರೆ.
ವಿಪಕ್ಷ ನಾಯಕರ ಆಯ್ಕೆ ಸಂಬಂಧ ದೆಹಲಿಯಲ್ಲಿ ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ ದೆಹಲಿಗೆ (New Delhi) ತಲುಪಲಿರುವ ಬಿಎಸ್‌ವೈ ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಮೈಸೂರು ಸಂಸದರ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್‌ಸ್ಟೇಬಲ್ ಅಮಾನತು
ಭಾನುವಾರ ಬಿಎಸ್‌ವೈ ದೆಹಲಿಯಲ್ಲೇ ಉಳಿಯಲಿದ್ದಾರೆ. ಇಂದೇ ದೆಹಲಿಯಲ್ಲಿ ವಿಪಕ್ಷ ನಾಯಕ ಆಯ್ಕೆ ಮಾಡಿ ಗೌಪ್ಯವಾಗಿ ಇಡಲಿದ್ದಾರೆ ಎನ್ನಲಾಗುತ್ತಿದೆ. ಹೈಕಮಾಂಡ್ ನೇತೃತ್ವದಲ್ಲಿ ಸೋಮವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ (Dharmendra Pradhan) ಆಗಮಿಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕರ ಹೆಸರು ಘೋಷಣೆ ಆಗಲಿದೆ. ಇದನ್ನೂ ಓದಿ: ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಪಡೆದು ವಂಚನೆ – ಗ್ಯಾಂಗ್ ಅರೆಸ್ಟ್
ಅಲ್ಲದೇ ಹೈಕಮಾಂಡ್ ಸಿಎಂ ಆಯ್ಕೆಗೆ ಅನುಸರಿಸಿದ್ದ ಮಾನದಂಡಗಳನ್ನೇ ವಿಪಕ್ಷ ನಾಯಕರ ಆಯ್ಕೆಗೂ ಅನುಸರಿಸುವ ಸಾಧ್ಯತೆಗಳಿವೆ. ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪರಿಷತ್ ಸದಸ್ಯ ಸುನೀಲ್ ನಮೋಶಿ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಸಹ ಬಎಸ್‌ವೈ ಅವರನ್ನ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]