Bengaluru CityDistrictsKarnatakaLatestMain Post

ತೇಜಸ್ವಿ ಸೂರ್ಯ ದೋಸೆ ಸವಿದಿದ್ದನ್ನು ಟೀಕಿಸಿದ್ದ ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ (Tejasvi Surya) ದೋಸೆ ಸವಿದ ವಿಚಾರವನ್ನು ಇಟ್ಟುಕೊಂಡು ಟೀಕೆ ಮಾಡಿದ ಕಾಂಗ್ರೆಸ್‍ಗೆ ಇದೀಗ ಬಿಜೆಪಿ ತಿರುಗೇಟು ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar ಹಬ್ಬದೂಟದ ಫೋಟೋ ಹಾಗೂ ದೋಸೆ ತಿಂದಿದ್ದಕ್ಕೆ ಟೀಕಿಸಿದ್ದ ಕಾಂಗ್ರೆಸ್ (Congress) ಟ್ವೀಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಬಿಜೆಪಿ (BJP) ತಿರುಗೇಟು ನೀಡಿದೆ. ಇದನ್ನೂ ಓದಿ: ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ- ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ

ಟ್ವೀಟ್‍ನಲ್ಲೇನಿದೆ..?: ಕಾಂಗ್ರೆಸ್ಸಿಗರೇ, ನಮಗೂ ನಿಮ್ಮ ಹಾಗೆಯೇ, ಜನರು ಸಂಕಷ್ಟದಲ್ಲಿರುವಾಗ ಜವಾಬ್ದಾರಿಯುತ ವಿಪಕ್ಷದ ರಾಜ್ಯ ಅಧ್ಯಕ್ಷನಾಗಿ ಬೆಂಗಳೂರಿನಲ್ಲೇ ಇರಬೇಕಾಗಿತ್ತು. ಆದರೆ ಭಾರತ್ ಜೋಡೋ ಯಾತ್ರೆ, ಹಬ್ಬದೂಟದಲ್ಲಿ ತೊಡಗಿಕೊಂಡಿದ್ದಾರೆ, ಎಂತಹ ಅಪ್ರಬುದ್ಧ ಕೆಪಿಸಿಸಿ (KPCC) ಅಧ್ಯಕ್ಷ ಎನ್ನಬಹುದು. ಆದರೆ ನಾವು ಆ ಕೆಲಸ ಮಾಡುವುದಿಲ್ಲ ಎಂದು ಕೂಡ ಬಿಜೆಪಿಯ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಳ್ಳಲಾಗಿದೆ.

ದೋಸೆ ವಿವಾದ: ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‍ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಅಂತ ವೀಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ವಿರೋಧ ಪಕ್ಷಗಳು ಸಂಸದರ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದವು.

ಹೋಟೆಲಿನಲ್ಲಿ ದೋಸೆ ಸವಿಯುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದ್ದರು.

Live Tv

Leave a Reply

Your email address will not be published.

Back to top button