Bengaluru CityDistrictsKarnatakaLatestLeading NewsMain Post

ಕೈ ನಾಯಕರ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆ, ಸಿಡಿಗಳೂ ಇದೆ – ಪ್ರಿಯಾಂಕ್‍ಗೆ ಬಿಜೆಪಿ ತಿರುಗೇಟು

ಬೆಂಗಳೂರು: ಪ್ರಿಯಾಂಕ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಬಿಜೆಪಿ ತಿರಗೇಟು ನೀಡಿದೆ.

bjP

ಈ ಸರ್ಕಾರದಲ್ಲಿ ಹಣ ಕೊಡದೇ ಯಾವುದೇ ಕೆಲಸ ಕೊಡಲ್ಲ. ಯುವಕರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೆ ಲಂಚ ಕೊಡಬೇಕು. ಯುವತಿಯರು ನೌಕರಿ ಪಡೆಯಬೇಕು ಅಂದ್ರೆ ಮಂಚ ಹತ್ತಬೇಕಾಗಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿರುವುದು ಲಂಚ ಹಾಗೂ ಮಂಚದ ಸರ್ಕಾರವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರು.

ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ, ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ ಎಂದು ಪ್ರಶ್ನಿಸಿ ಕೂಡಲೇ ಕ್ಷಮೆಯಾಚಿಸಿ ಎಂದು ಆಗ್ರಹಿಸಿದೆ. ಇದನ್ನೂ ಓದಿ: ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕು – ಬಿಜೆಪಿ ಟೀಕಿಸೋ ಭರದಲ್ಲಿ ಪ್ರಿಯಾಂಕ್ ಖರ್ಗೆ ವಿವಾದ

ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ಟಾಂಗ್ ನೀಡಿದ್ದಾರೆ.

ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ ಬೆನ್ನಲ್ಲೇ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮಳೆ ಅವಾಂತರ – ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿಯಲ್ಲಿ ಬಿರುಕು ಬಿಟ್ಟ ರಸ್ತೆ

Live Tv

Leave a Reply

Your email address will not be published.

Back to top button