ಬೆಂಗಳೂರು: ವಿಧಾನಸೌಧದಲ್ಲೇ ದಂಧೆ ಶುರು ಮಾಡಿರುವ ನಿಮ್ಮ ಸರ್ಕಾರ ಭ್ರಷ್ಟಚಾರ ಮುಕ್ತವಾಗಿದೆಯಾ? ಮೊದಲು ಪುಟ್ಟರಂಗಶೆಟ್ಟಿ ಅವರಿಂದ ರಾಜೀನಾಮೆ ಕೊಡಿಸಿ ನಿಮ್ಮ ಪೌರುಷ ತೋರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಆಗ್ರಹಿಸಿದೆ.
ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಅವರು ಮಾಡಿದ್ದ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ, ಟ್ವಿಟರ್ ನಲ್ಲಿ ಒಣ ಪೌರುಷ ತೋರಿಸುವುದನ್ನು ನಿಲ್ಲಿಸಿ. ನಿಮ್ಮ ಆತ್ಮೀಯ, ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯಲ್ಲಿ 25.76 ಲಕ್ಷ ಹಣ ಸಿಕ್ಕಿದೆ. ವಿಧಾನಸೌಧದಲ್ಲಿಯೇ ದಂಧೆ ಶುರು ಮಾಡಿದ್ದೀರಿ. ಇದೇನಾ ನಿಮ್ಮ ಭ್ರಷ್ಟ ಮುಕ್ತ ಸರ್ಕಾರ? ಮೊದಲು ಪುಟ್ಟರಂಗಶೆಟ್ಟಿ ಅವರಿಂದ ರಾಜೀನಾಮೆ ಕೊಡಿಸಿ ನಿಮ್ಮ ಪೌರುಷ ತೋರಿಸಿ ಎಂದು ಸವಾಲು ಹಾಕಿದೆ.
Advertisement
ಸಿದ್ದರಾಮಯ್ಯ ಅವರೇ, ಕುಂಬಳಕಾಯಿ ಕಳ್ಳ ಅಂದರೆ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ? ಕೇಂದ್ರ ಸರಕಾರ ಮತ್ತು ಐ.ಟಿ ಇಲಾಖೆ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಜನರ ದಾರಿತಪ್ಪಿಸುವುದನ್ನು ನಿಲ್ಲಿಸಿ. ವಕೀಲರು, ಮಾಜಿ ಮುಖ್ಯಮಂತ್ರಿ ಆಗಿರುವ ನೀವು ಆ ಸ್ಥಾನದ ಗೌರವ ಕಾಪಾಡಿಕೊಳ್ಳಿ. ಅಜ್ಞಾನಿಯಂತೆ ಮಾತನಾಡಿ ಮಾನ-ಮರ್ಯಾದೆ ಕಳೆದುಕೊಳ್ಳಬೇಡಿ. https://t.co/dsTPWmoYAT
— BJP Karnataka (@BJP4Karnataka) January 5, 2019
Advertisement
ಮತ್ತೊಂದು ಟ್ವೀಟ್ ನಲ್ಲಿ, ಸಿದ್ದರಾಮಯ್ಯ ಅವರೇ, ಕುಂಬಳಕಾಯಿ ಕಳ್ಳ ಅಂದರೆ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ?. ಕೇಂದ್ರ ಸರ್ಕಾರ ಮತ್ತು ಐ.ಟಿ ಇಲಾಖೆ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಿ. ವಕೀಲರು, ಮಾಜಿ ಮುಖ್ಯಮಂತ್ರಿ ಆಗಿರುವ ನೀವು ಆ ಸ್ಥಾನದ ಗೌರವ ಕಾಪಾಡಿಕೊಳ್ಳಿ. ಅಜ್ಞಾನಿಯಂತೆ ಮಾತನಾಡಿ ಮಾನ-ಮರ್ಯಾದೆ ಕಳೆದುಕೊಳ್ಳಬೇಡಿ ಎಂದು ಹೇಳಿ ತಿರುಗೇಟು ನೀಡಿದೆ.
Advertisement
ರಾಜ್ಯದಲ್ಲಿ ಸಿನಿಮಾ ನಟ, ನಿರ್ಮಾಪರ ಮೇಲೆ ಆಗಿರುವ ಐಟಿ ದಾಳಿ ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ್ದ ಸಿದ್ದರಾಮಯ್ಯ ಅವರು, ತೆರಿಗೆ ಪಾವತಿಯಲ್ಲಿ ವ್ಯತ್ಯಾಸವಾಗಿದ್ದರೆ ಸಂಬಂಧಿತ ಲೆಕ್ಕಪತ್ರಗಳ ಪರಿಶೀಲನೆ ನಡೆಸುವ ಅಧಿಕಾರ ಐಟಿ ಇಲಾಖೆಗೆ ಇದೆ. ಅದನ್ನು ಗೌರವಿಸೋಣ. ಆದರೆ ಮೋದಿ ಸರ್ಕಾರದಲ್ಲಿ ಐಟಿ ಇಲಾಖೆಯ ಕಾರ್ಯ ಶೈಲಿಯನ್ನು ಗಮನಿಸಿದರೆ ಅದು ನಡೆಸುತ್ತಿರುವ ದಾಳಿಯ ಹಿಂದೆ ದುರುದ್ದೇಶ ಇರಬಹುದೆಂಬ ಅನುಮಾನ ಮೂಡುತ್ತಿದೆ ಎಂದು ಟ್ವೀಟ್ ಮಾಡಿದ್ದರು.
Advertisement
ಸಿದ್ದರಾಮಯ್ಯ ಅವರೇ, ಟ್ವಿಟರ್ ನಲ್ಲಿ ಒಣ ಪೌರುಷ ತೋರಿಸುವುದನ್ನು ನಿಲ್ಲಿಸಿ. ನಿಮ್ಮ ಆತ್ಮೀಯ, ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯಲ್ಲಿ 25.76 ಲಕ್ಷ ಹಣ ಸಿಕ್ಕಿದೆ. ವಿಧಾನಸೌಧದಲ್ಲಿಯೇ ದಂಧೆ ಶುರು ಮಾಡಿದ್ದೀರಿ. ಇದೇನಾ ನಿಮ್ಮ ಭ್ರಷ್ಟ ಮುಕ್ತ ಸರಕಾರ? ಮೊದಲು ಪುಟ್ಟರಂಗಶೆಟ್ಟಿ ಅವರಿಂದ ರಾಜೀನಾಮೆ ಕೊಡಿಸಿ ನಿಮ್ಮ ಪೌರುಷ ತೋರಿಸಿ. https://t.co/dsTPWmoYAT
— BJP Karnataka (@BJP4Karnataka) January 5, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv