Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನೂತನ ಕೇಂದ್ರ ಸಚಿವರು, ಸಂಸದರಿಗೆ ಬಿಜೆಪಿಯಿಂದ ಸನ್ಮಾನ, ಅಭಿನಂದನೆ; ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ದೋಸ್ತಿ ನಾಯಕರು

Public TV
Last updated: June 22, 2024 6:12 pm
Public TV
Share
5 Min Read
BJP JDS 1
SHARE

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಗೆದ್ದ ಬಿಜೆಪಿ-ಜೆಡಿಎಸ್ ಸಂಸದರಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‌ಡಿಎ (NDA) ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ದೋಸ್ತಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಕ್ಸಮರ ನಡೆಸಿದರು.

ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಜೆಪಿ- ಜೆಡಿಎಸ್ (BJP-JDS) ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ಜನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ತಲೆಕೆಡಿಸಿಕೊಳ್ಳಬೇಡಿ ಸರ್- ಜೈಲುಪಾಲಾದ ದರ್ಶನ್‌ಗೆ ಧೈರ್ಯ ಹೇಳಿದ ಅಭಿಮಾನಿ

BJP JDS 2

ಕಾಂಗ್ರೆಸ್ ಪಕ್ಷದ ಸಾಕಷ್ಟು ಅಪಪ್ರಚಾರದ ನಡುವೆ, ಆಮಿಷಗಳ ನಡುವೆ ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ. ರಾಜ್ಯದ ನೂತನ ಸಂಸದರಿಗೆ ಅಭಿನಂದನೆಗಳು. ಹಿಂದೆ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷ ಈಗ 9 ಸ್ಥಾನ ಗೆದ್ದಿರಬಹುದು. ಆದರೆ ಮತ್ತೊಂದು ಕಡೆ ರಾಜ್ಯದಲ್ಲಿ 145ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಸಚಿವರಿರುವ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಲೀಡ್ ಪಡೆದಿದ್ದಾರೆ ಎಂದು ವಿವರಿಸಿದರು.

ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಹಿನ್ನಡೆ:
ಮುಂದಿನ 4 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕರ್ನಾಟಕವು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿತ್ತು. ಆದರೆ ಕಳೆದ ಒಂದು ವರ್ಷದ ಕಾಂಗ್ರೆಸ್ ದುರಾಡಳಿತದಲ್ಲಿ ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲೂ ಹಿನ್ನಡೆ ಸಾಧಿಸುವಂತಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು. ಇದನ್ನೂ ಓದಿ: 13 ವರ್ಷಗಳ ನಂತರ ‘ದಾಸ’ ಮತ್ತೆ ಜೈಲುಪಾಲು!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ ಎಂದರೆ ಸುಳ್ಳು ಗ್ಯಾರಂಟಿ, ಭ್ರಷ್ಟಾಚಾರ, ದುರಾಡಳಿತ ಮತ್ತು ಅಭಿವೃದ್ಧಿ ಶೂನ್ಯತೆ ಎಂಬುದನ್ನು ಜನರಿಗೆ ಮನವರಿಕೆ ಮಾಡಲು ಮನವಿ ಮಾಡಿದರು. ಸದ್ಯವೇ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ನಾವು ಜೆಡಿಎಸ್ ಪಕ್ಷದ ಜೊತೆಗೂಡಿ ಇವುಗಳಲ್ಲಿ ಗೆಲುವು ಸಾಧಿಸಿ ನಮ್ಮ ಶಕ್ತಿಯನ್ನು ತೋರಿಸಬೇಕು ಎಂದು ತಿಳಿಸಿದರು. ಕಾರ್ಯಕರ್ತರ ಪರಿಶ್ರಮದಿಂದ ಈ ದೊಡ್ಡ ಸಂಖ್ಯೆಯಲ್ಲಿ ಸಂಸದರು ಆಯ್ಕೆಯಾಗಿದ್ದಾರೆ ಎಂದರು.

BJP JDS

ರಾಜ್ಯ ಚುನಾವಣಾ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ಸಿನದು ತಪ್ಪು ನೀತಿಗಳ ಜನವಿರೋಧಿ ಸರ್ಕಾರ. ಡೀಸೆಲ್, ಪೆಟ್ರೋಲ್ ದರ ಏರಿಕೆ ಸೇರಿ ಎಲ್ಲಾ ವಸ್ತುಗಳ ದರ ಏರಿಸಿದ್ದಾರೆ ಎಂದು ಟೀಕಿಸಿದರು. ವಾಲ್ಮೀಕಿ (ಎಸ್‌ಟಿ) ನಿಗಮದ ಹಗರಣ ಸಂಬಂಧ ಕೇವಲ ಒಬ್ಬ ಸಚಿವರು ರಾಜೀನಾಮೆ ಕೊಟ್ಟರೆ ಸಾಲದು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ದಾಖಲೆ ಕೇಳಿದ ಟ್ರಾಫಿಕ್‌ ಪೊಲೀಸಪ್ಪನನ್ನೇ ಕೆಲ ಮೀಟರ್‌ ಎಳೆದೊಯ್ದ ಚಾಲಕ!

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಬಿಜೆಪಿ- ಜೆಡಿಎಸ್ ಹೊಂದಾಣಿಕೆಯಿಂದ ಕರ್ನಾಟಕದಲ್ಲಿ ಅಭೂತಪೂರ್ವ ಜಯವನ್ನು ಸಾಧಿಸಲಾಗಿದೆ. 20 ಸ್ಥಾನ ಗೆಲ್ಲುವುದಾಗಿ ಕಾಂಗ್ರೆಸ್ ಪಕ್ಷವು ಹೇಳುತ್ತಿತ್ತು. ಆದರೆ ಕಾಂಗ್ರೆಸ್ ಪಕ್ಷವನ್ನು ಜನರು ಕಸದ ಬುಟ್ಟಿಗೆ ಎಸೆದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಪೆಟ್ರೋಲ್- ಡೀಸೆಲ್ ದರ ಏರಿಸಿದ ಕಾಂಗ್ರೆಸ್ಸಿಗೆ ಈಗ ಕೇಡುಗಾಲ ಬಂದಿದೆ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ವಿಧಾನಸಭೆ ಚುನಾವಣೆ ನಡೆದು ಕೇವಲ ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಅಹಂಕಾರಕ್ಕೆ ಜನರು ಸ್ಪಷ್ಟವಾದ ಕಪಾಳಮೋಕ್ಷ ಮಾಡಿದ್ದಾರೆ ಎಂದು. ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಇದರಲ್ಲಿ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದಗಳು ಎಂದರು. ಇದನ್ನೂ ಓದಿ: 17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಕೊಡಬೇಕಿತ್ತು. ಭ್ರಷ್ಟ, ಹಿಂದೂ ವಿರೋಧಿ, ಬೆಲೆ ಏರಿಕೆಗಳ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ನಾವು ಶ್ರಮಿಸಬೇಕಿದೆ. ಕಾಂಗ್ರೆಸ್ ಅಪಪ್ರಚಾರದ ಅಬ್ಬರದಲ್ಲೂ ಎನ್‌ಡಿಎ ಪ್ರಚಂಡ ವಿಜಯ ಸಾಧಿಸಿದೆ. ನೆಹರೂ ಅವರ ಬಳಿಕ ಸತತ ಮೂರನೇ ಬಾರಿಗೆ ಪ್ರಧಾನಿಯಾದ ವ್ಯಕ್ತಿ ನರೇಂದ್ರ ಮೋದಿಯವರು ಎಂಬುದನ್ನು ಮರೆಯಬಾರದು. ಕೇರಳ, ಪಶ್ಚಿಮ ಬಂಗಾಳ, ದೆಹಲಿ ಮತ್ತಿತರ ಕಡೆ ಪರಸ್ಪರ ಬಡಿದಾಡುವ ಪಕ್ಷಗಳ ಇಡೀ ಇಂಡಿ ಒಕ್ಕೂಟ ಸೇರಿ 230 ಸೀಟು ಪಡೆದಿವೆ. ಬಿಜೆಪಿಯೊಂದೇ 240 ಸ್ಥಾನಗಳನ್ನು ಪಡೆದಿದೆ ಎಂದು ವಿವರಿಸಿದರು.

ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಎಲ್ಲಾ ಪ್ರಭಾವ, ಹಣದ ಹೊಳೆ, ಎಲ್ಲ ಆಮಿಷಗಳ ನಡುವೆ ರಾಜ್ಯದ ಜನರು ನಮ್ಮನ್ನು ಗೆಲ್ಲಿಸಿದ್ದಾರೆ. ಮೋದಿಯವರ ನೇತೃತ್ವದಲ್ಲಿ ಸರ್ಕಾರ ರಚನೆ ಆಗಬಾರದೆಂದು ದೇಶೀಯ ಶಕ್ತಿಗಳು ಮಾತ್ರವಲ್ಲದೆ, ವಿದೇಶೀಯ ಶಕ್ತಿಗಳೂ ಕೆಲಸ ಮಾಡಿದ್ದವು ಎಂದು ಆರೋಪಿಸಿದರು. ಅತ್ಯುತ್ಸಾಹದಿಂದ ಕೆಲಸ ಮಾಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು. ರಾಜ್ಯ ಸರ್ಕಾರದ ಒಂದು ವಿಕೆಟ್ ಬಿದ್ದಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಿಎಂ, ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಜು. 4 ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು

ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಾತನಾಡಿ, ಈ ಗೆಲುವಿಗೆ ಬಿಜೆಪಿ ಕೊಡುಗೆ ಮಾತ್ರವಲ್ಲದೆ, ಜೆಡಿಎಸ್ ಮುಖಂಡರು, ಕಾರ್ಯಕರ್ತರ ಕೊಡುಗೆಯೂ ಇದೆ ಎಂದರು. ಸದಾ ವಂಚನೆ ಮಾಡುತ್ತಿರುವ ಕಾಂಗ್ರೆಸ್ಸಿನ ನಡೆಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಎರಡೂ ಪಕ್ಷಗಳ ಕಾರ್ಯಕರ್ತರ ಶ್ರಮ, ನಾಡಿನ ಜನತೆಯ ಆಶೀರ್ವಾದಕ್ಕೆ ಧನ್ಯವಾದಗಳನ್ನು ತಿಳಿಸಿದರು. ನಾನು ಜನರಿಗೆ ಪರಿಚಯವಾಗಲು 2006ರಲ್ಲಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದ ಯಡಿಯೂರಪ್ಪನವರೇ ಕಾರಣ ಎಂದು ವಿಶ್ಲೇಷಿಸಿದರು. ಜೆಡಿಎಸ್- ಬಿಜೆಪಿ ಮೈತ್ರಿ ಅತ್ಯಂತ ಸಹಜವಾದುದು ಎಂದು ನುಡಿದ ಅವರು, ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಹೊಂದಾಣಿಕೆಯನ್ನು ಮುಕ್ತ ಮನಸ್ಸಿನಿಂದ ಒಪ್ಪಿ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು. ವಿಶ್ವದಲ್ಲೇ ಮೋದಿಯವರ ಬಗ್ಗೆ ಅತ್ಯಂತ ಗೌರವ- ವಿಶ್ವಾಸದ ಭಾವನೆ ಇದೆ. ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂಬಂತೆ ಕಾಂಗ್ರೆಸ್ ಸರ್ಕಾರ ವರ್ತಿಸುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 55 ಮಂದಿ ಸಾವು ಪ್ರಕರಣ – ಪ್ರಮುಖ ಆರೋಪಿ ಅರೆಸ್ಟ್‌

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೋರ್ ಕಮಿಟಿ ಸದಸ್ಯರು, ನೂತನ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಜೆಡಿಎಸ್ ಮುಖಂಡರು, ಎರಡೂ ಪಕ್ಷಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಭಾರತ ಮಾತೆ, ಪಕ್ಷದ ಸ್ಥಾಪಕರಿಗೆ ಪುಷ್ಪಾರ್ಚನೆ ಮಾಡಿ, ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಸ್ವಾಗತಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ, ಹಿರಿಯ ಮುಖಂಡ ಭಾನುಪ್ರಕಾಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಇದನ್ನೂ ಓದಿ: ತೈಲ ಬೆಲೆ ಏರಿಕೆಗೂ ಗ್ಯಾರಂಟಿ ಯೋಜನೆಗೂ ಸಂಬಂಧವಿಲ್ಲ: ಡಿಕೆಶಿ

TAGGED:bengalurubjpcongressjdsndaಎನ್‍ಡಿಎಕಾಂಗ್ರೆಸ್ಜೆಡಿಎಸ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

Mysuru Siddaramaiah CESC Power Man
Districts

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ

Public TV
By Public TV
5 minutes ago
BBMP
Bengaluru City

ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

Public TV
By Public TV
7 minutes ago
Pune Bank Manager Suicide
Crime

ಪುಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ – ಕೆಲಸದ ಒತ್ತಡವೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟು ಸೂಸೈಡ್

Public TV
By Public TV
45 minutes ago
HPV Vaccine
Bengaluru City

14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ – ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

Public TV
By Public TV
46 minutes ago
Ishaq Dar
Latest

ಪಹಲ್ಗಾಮ್‌ ದಾಳಿಯನ್ನ TRF ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ – ಉಗ್ರ ಸಂಘಟನೆಗೆ ಪಾಕ್‌ ನೇರ ಬೆಂಬಲ

Public TV
By Public TV
2 hours ago
DK Shivakumar
Bengaluru City

ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?