ನವದೆಹಲಿ: ನನಗೆ ಮಂತ್ರಿ ಸ್ಥಾನ ಬೇಕೆಂದು ನಾನು ಒತ್ತಡ ಹಾಕುವುದಿಲ್ಲ ಎಂದು ಮಂಡ್ಯ (Mandya MP) ಸಂಸದ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.
ಎನ್‌ಡಿಎ ಸಭೆಯಲ್ಲಿ (NDA Meeting) ಭಾಗವಹಿಸಲು ದೆಹಲಿಗೆ (Delhi) ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ನರೇಂದ್ರ ಮೋದಿ (Narendra Modi) ನಾಯಕತ್ವದಲ್ಲಿ ಮತ್ತೆ ಸರ್ಕಾರ ಮುಂದುವರಿಯಲಿದೆ. ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸ್ಥಳೀಯ ಪಕ್ಷಗಳಿಗೆ ಸಹ ಖಾತೆ ನೀಡುತ್ತಾರೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎನ್ನುವುದು ಹೈಕಮಾಂಡ್‌ಗೆ (High Command) ಗೊತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಗರ್ ಖಂಡ್ರೆ ಗೆಲುವು – ಬೀದರ್‌ನಲ್ಲಿ ಈಗ ಭಾಲ್ಕಿ ಶಕ್ತಿ ಕೇಂದ್ರ!
ನಾಡಿನ ಜನತೆಗೆ, ದೇಶಕ್ಕೆ ಒಳ್ಳೆದಾಗುವ ಖಾತೆ ಸಿಕ್ಕಿದರೆ ಉತ್ತಮವಾಗಿ ಕೆಲಸ ಮಾಡಬಹುದು. ಡಾ. ಮಂಜುನಾಥ್‌ಗೆ (Dr Manjunath) ಖಾತೆ ನೀಡುವ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ನಾನು ನಾನು ಒತ್ತಡ ಹಾಕುತ್ತಿಲ್ಲ. ಅವರು ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಅಷ್ಟೇ. ತೀರ್ಮಾನ ಏನಿದ್ದರೂ ಸಹ ಅವರದ್ದು ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಟಿಕೆಟ್ ಪಡೆಯಲು ಯೋಗೇಶ್ವರ್ ಕಸರತ್ತು
ಸಚಿವ ನಾಗೇಂದ್ರ (Nagendra) ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಕೊಡಲೇಬೇಕಿತ್ತು ಕೊಟ್ಟಿದ್ದಾರೆ. ಕೊನೆಗೂ ಅತ್ತು ಕರೆದು ರಾಜೀನಾಮೆ ನೀಡಿದ್ದಾರೆ. ಸಿಎಂ ಡಿಸಿಎಂ ಎಷ್ಟು ನಾಟಕ ಮಾಡಿದ್ದಾರೆ ಅಂತ ನಿನ್ನೆ ನೀವೇ ತೋರಿಸಿದ್ದೀರಿ ಎಂದರು.