ಲಕ್ನೋ: ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಭಯೋತ್ಪಾದನೆಗೆ ಮಧ್ಯಪ್ರದೇಶದ ಕಾಂಗ್ರೆಸ್ ಹಾಗೂ ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳೇ ಉದಾಹರಣೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಇರುವ ವ್ಯತ್ಯಾಸವನ್ನು ಜನರೇ ಗುರುತಿಸಬೇಕು ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.
Advertisement
ಉತ್ತರ ಪ್ರದೇಶದ ಸರ್ಕಾರವು ದೇಶದ್ರೋಹ ಪ್ರಕರಣದ ಅಡಿ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ 14 ಜನ ವಿದ್ಯಾರ್ಥಿಗಳನ್ನು ಬಂಧಿಸಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವು ಗೋವುಗಳ ಹತ್ಯೆ ತಡೆಗೆ ಮುಸ್ಲಿಮರ ಮೇಲೆ ಹೇರಲಾದ ರಾಷ್ಟ್ರೀಯ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಮೂಲಕ ಎರಡೂ ಪಕ್ಷಗಳು ರಾಜ್ಯದಲ್ಲಿ ಭಯೋತ್ಪಾದನೆ ನಡೆಸಿವೆ ಎಂದು ಕಿಡಿಕಾರಿದ್ದಾರೆ.
Advertisement
Congress govt in MP like BJP slapped atrocious NSA against Muslims for cow slaughter. Now the UP BJP govt booked 14 AMU students under notorious sedition charges. Both are example of state terror & condemnable. People should decide what is difference between the cong & BJP govt?
— Mayawati (@Mayawati) February 14, 2019
Advertisement
ಈ ಹೇಳಿಕೆಗಳನ್ನು ನೀಡುವ ಮೂಲಕ ಮಾಯಾವತಿ ಅವರು ಮಹಾಘಟಬಂಧನ್‍ನಿಂದ ದೂರ ಸರಿಯುವ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ವಿರೋಧಿ ಪಕ್ಷಗಳು ರಣತಂತ್ರ ರೂಪಿಸಿದ್ದವು. ಆದರೆ ಈಗ ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ ಹಾಗೂ ಸಮಾಜವಾದಿ ಪಕ್ಷ (ಎಸ್‍ಪಿ) ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್‍ಗೆ ಬಿಗ್ ಶಾಕ್ ಕೊಟ್ಟಿದ್ದವು.
Advertisement
ಮಧ್ಯಪ್ರದೇಶ ಹಾಗೂ ಛತ್ತೀಸಢದಲ್ಲಿ ಸರ್ಕಾರ ರಚನೆ ಮಾಡಲು ಕಾಂಗ್ರೆಸ್‍ಗೆ ಮಾಯಾವತಿ ಬೆಂಬಲ ನೀಡಿದ್ದಾರೆ. ಆದರೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ವಿರುದ್ಧವೇ ಕಣಕ್ಕೆ ಇಳಿದಿದ್ದು ಅಚ್ಚರಿಗೆ ಕಾರಣವಾಗಿದೆ.
Mayawati:Congress ki sarkaar ne purvvarti BJP ki tarah gau hatya ke shak mein musalmanon par barbar karyawahi ki. Ab UP BJP sarkaar ne AMU ke 14 students par deshdroh ka mukadma darz kiya.Dono sarkari aatank hai, ati nindniya. Log faisla karein ki dono sarkaron mein kya antar hai pic.twitter.com/yXTdW1YFpW
— ANI UP/Uttarakhand (@ANINewsUP) February 14, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv