ಕೋಲಾರ: ಸಚಿವ ನಾಗೇಂದ್ರ (B.Nagendra) ರಾಜೀನಾಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಕೋಲಾರದಲ್ಲಿ (Kolar) ಬಿಜೆಪಿಯಿಂದ (BJP) ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೋಲಾರ ಹೊರ ವಲಯದ ಟಮಕ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವ ಬಿಜೆಪಿ ಮುಖಂಡರು, ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿದ್ದ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದರು. ಸಿಎಂ ಕೂಡಲೆ ನಾಗೇಂದ್ರ ರಾಜೀನಾಮೆ ಪಡೆಯಬೇಕು, ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಿತಿನ್ ನಬಿನ್ ಹೊಸ ತಂಡ ರಚನೆ – ರಾಷ್ಟ್ರೀಯ ಉಪಾಧ್ಯಕ್ಷ ಪಟ್ಟಕ್ಕೆ ರಾಜ್ಯದ ನಾಗರಾಜ, ಸ್ಮೃತಿ ಇರಾನಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ
ಅಲ್ಲದೇ ಬಾವುಟ ಹಾರಿಸಲು ಬಿಡುವಿಲ್ಲದ ದೇಶದ್ರೋಹಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮ ಕೈಗೊಳ್ಳಬೇಕು, ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿದ ಸೋನಿಯಾ ಗಾಂಧಿ ವಿರುದ್ಧವೂ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಅಧಿನಾಯಕಿಯಾಗಿ ವಂದೇ ಮಾತರಂ ಗೀತೆಯನ್ನ ವಿರೋಧಿಸುವ ಮೂಲಕ ದೇಶದ್ರೋಹ ಬಗೆಯುವ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನ ಕೂಗಿದರು. ಇದನ್ನೂ ಓದಿ: ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ – ಪರಿಷತ್‌ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
ಇನ್ನೂ ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕ ಮಂಜುನಾಥ್ ಗೌಡ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನ ಕೂಗಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್, ಹಗರಣ ಕುರಿತು ಅಂದಿನ ಸಿಎಂ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಅಂದರೆ 187 ಕೋಟಿಯಲ್ಲ, ಬದಲಾಗಿ 87 ಕೋಟಿ ಅಷ್ಟೆ ಎಂದು ಒಪ್ಪಿಕೊಂಡಿದ್ದಾರೆ. ಒಂದು ಸಾರಿ ಕದ್ರೆ ಕಳ್ಳನೇ, ಇಂತಹ ಹಗರಣ ಮಾಡಿರುವ ಶಾಸಕನಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚಾಮರಾಜನಗರ ಎನ್‌ಕೌಂಟರ್ ಪ್ರಕರಣದ ನ್ಯಾಯಾಂಗ ತನಿಖೆಗಾಗಿ ಪರಿಷತ್‌ನಲ್ಲಿ ಗಲಾಟೆ
