ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lokabha Election) ಬಿಜೆಪಿಗೆ 400 ಸೀಟುಗಳು ಸಿಗೋದು ಖಚಿತ. ಮತ್ತೆ ಮೋದಿಯವರು ಪ್ರಧಾನಿ ಆಗುವುದು ಖಚಿತ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ (BJP) ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತಾಡಿದ ಭೂಪೇಂದ್ರ ಯಾದವ್, ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರದಿಂದ ಅನೇಕ ಅನುದಾನಗಳು, ಜಿಎಸ್‍ಟಿ ಬಾಕಿ ಬಂದರೂ ಅಭಿವೃದ್ಧಿ ಶೂನ್ಯ. ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರಿಗೆ ವಂಚಿಸುತ್ತಿದೆ ಎಂದು ಆರೋಪಿಸಿದರು.
Advertisement
Advertisement
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 28 ಕ್ಷೇತದಲ್ಲೂ ಜಯಿಸಲಿದೆ. ಬಳಿಕ ರಾಜ್ಯದಲ್ಲಿ ಕಮಲ ಅರಳುವುದು ಗ್ಯಾರಂಟಿ. ಪಶ್ಚಿಮ ಬಂಗಾಳ ಹಾಗೂ ಬಿಹಾರದ ಬೆಳವಣಿಗೆಯಿಂದ ಕಾಂಗ್ರೆಸ್ ಮತ್ತಷ್ಟು ಕುಗ್ಗಿದೆ ಎಂದು ಭೂಪೇಂದ್ರ ಯಾದವ್ ಹೇಳಿದರು.
Advertisement
ಮೋದಿಯವರಿಗೆ ಕೊಡುಗೆ ನೀಡಬೇಕಿದೆ: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಮಾತನಾಡಿ, ನಮಗೆ ಮೋದಿಯೇ ಗ್ಯಾರಂಟಿ. ಹತ್ತು ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ ರೈಲ್ವೆ, ಹೆದ್ದಾರಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಯಡಿಯೂರಪ್ಪ ಕರೆ ಕೊಟ್ಟರು.
Advertisement
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಮಾತಾಡಿ, ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ ಸರ್ಕಾರ. ಅರೆಬರೆ ಗ್ಯಾರಂಟಿ ಇಟ್ಕೊಂಡು ಲೋಕಸಭೆ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಇಡೀ ದೇಶ ಮೋದಿಯವರು ಮತ್ತೆ ಪ್ರಧಾನಿ ಆಗಲಿ ಅಂತ ಕಾಯುತ್ತಿದ್ದಾರೆ. ನಾವು ಈ ಬಾರಿ ರಾಜ್ಯದಲ್ಲಿ ಎಲ್ಲ 28 ಕ್ಷೇತ್ರ ಗೆಲ್ಲೋದು ನಿಶ್ಚಿತ ಅಂತ ಗುಡುಗಿದರು. ಇದನ್ನೂ ಓದಿ: ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ: ಪ್ರಹ್ಲಾದ್ ಜೋಶಿ
ಲೋಕಸಭಾ ಚುನಾವಣೆ ದೃಷ್ಟಿಯಿಂದ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ಶೋಭಾ ಕರಂದ್ಲಾಜೆ, ಯಡಿಯೂರಪ್ಪ, ವಿಜಯೇಂದ್ರ, ಶೆಟ್ಟರ್, ಬೊಮ್ಮಾಯಿ, ಸಿಟಿ ರವಿ, ಕೋಟಾ ಶ್ರೀನಿವಾಸ್ ಪೂಜಾರಿ, ಅಶೋಕ್, ಈಶ್ವರಪ್ಪ, ಅಶ್ವಥ್, ನಾರಾಯಣ್, ಕಾರಜೋಳ, ಕಟೀಲ್ ಸೇರಿದಂತೆ ಸಂಸದರು, ಶಾಸಕರು, ಮಾಜಿಗಳು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಅಂತ 900 ಅಪೇಕ್ಷಿತರು ಭಾಗವಹಿಸಿದ್ದರು. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಜೊಳಿ, ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್, ಮಾಜಿ ಸಚಿವ ವಿ ಸೋಮಣ್ಣ, ಮಾಜಿ ಸಚಿವ ಸುಧಾಕರ್ ಗೈರಾಗಿದ್ರು. ರಾಮಮಂದಿರ ನಿರ್ಮಾಣ ಹಿನ್ನೆಲೆ ಮೋದಿಯವರಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯ್ತು. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಖಂಡನಾ ನಿರ್ಣಯ ತೆಗೆದುಕೊಳ್ಳಲಾಯ್ತು.