– ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ
– ರವಿ ಬಂಧನದ ಹೆಸರಲ್ಲಿ ಬಿಜೆಪಿ ಜನರಿಗೆ ಟೋಪಿ ಹಾಕ್ತಿದೆ
ಕಲಬುರಗಿ: ಬಿಜೆಪಿ (BJP) ಪಕ್ಷದವರು ಪವಿತ್ರವಾದ ಕೇಸರಿ (Saffron) ಬಟ್ಟೆಯನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ವಿಷಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಬುಧವಾರ ಜಿಲ್ಲೆಯ ಸೇಡಂ ತಾಲೂಕಿನ ನಿಡಗುಂದಾ ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್‌ಡಿಕೆ, ಬಿಜೆಪಿಯವರು ಪವಿತ್ರ ಕೇಸರಿ ಬಟ್ಟೆ ಹಾಕಿ, ಅದರ ಪಾವಿತ್ರ‍್ಯತೆಯನ್ನು ಹಾಳು ಮಾಡುತ್ತಿದ್ದಾರೆ. ಇಂತಹವರು ದೇಶಕ್ಕೆ ಉಪದೇಶ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಸ್ಯಾಂಟ್ರೋ ರವಿ (Santro Ravi) ವಿಚಾರವಾಗಿ ಮಾತನಾಡಿದ ಅವರು, ಜಗದೀಶ್ ಎಂಬ ವ್ಯಕ್ತಿ ಕಳೆದ ವರ್ಷ ಜನವರಿ 22 ರಂದು ಸ್ಯಾಂಟ್ರೋ ರವಿ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ಸ್ಯಾಂಟ್ರೋ ರವಿ ನಾನು ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಬರೆದು ಕೊಟ್ಟಿದ್ದಾನೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್. ವಿಶ್ವನಾಥ್
ಆತ 3-4 ವರ್ಷಗಳಿಂದಲೂ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಬಿಜೆಪಿಯ ಹಲವು ಶಾಸಕರು, ಸಚಿವರ ಜೊತೆಗೆ ಆತನ ಒಡನಾಟ ಇದ್ದು, ಹೀಗಾಗಿ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿದ್ದಾಗಿ ಆತ ಪೋಲಿಸರ ಮುಂದೆ ಹೇಳಿಕೆ ಕೊಟ್ಟಿದ್ದಾನೆ ಎಂದು ಕುಮಾರಸ್ವಾಮಿ ಹೇಳಿದರು.
ಬಿಜೆಪಿಯವರು ಒಂದು ವರ್ಷದಿಂದ ಅವನನ್ನು ಬಿಟ್ಟು, ಈಗ ಅರೆಸ್ಟ್ ಮಾಡುತ್ತೇವೆ ಎಂದು ಹೇಳುವ ಮೂಲಕ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ರಸ್ತೆ ಸ್ವಚ್ಛಗೊಳಿಸಿದ ಡಿಕೆಶಿ, ಸಿದ್ದರಾಮಯ್ಯ!
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k