ಬೆಳಗಾವಿ: ಮಹಾರಾಷ್ಟ್ರ (Maharashtra) ರಾಜ್ಯದಲ್ಲಿ ದೇವೇಂದ್ರ ಫಡ್ನವೀಸ್ ಅವರ ತ್ಯಾಗದಿಂದ ಬಿಜೆಪಿ (BJP) ಮತ್ತಷ್ಟು ಬಲಿಷ್ಠವಾಗಿದೆ. ಹಾಗಾಗಿ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 160-170 ಸೀಟ್ ಗೆದ್ದು ಬಿಜೆಪಿ ಬಹುಮತ ಪಡೆಯಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರಕ್ಕೆ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಸೇರಿ ಕನ್ನಡ ಪ್ರದೇಶಗಳಲ್ಲಿ ಜವಾಬ್ದಾರಿ ಕೊಟ್ಟಿದ್ದರು. ಆದರೆ ನನ್ನ ಹೆಸರು ನೇರವಾಗಿ ಹಾಕಬೇಡಿ ಎಂದು ಹೇಳಿದ್ದೇನೆ. ಅಣ್ಣಾಸಾಹೇಬ ಜೊಲ್ಲೆ ಮತ್ತೆ ನಾವು ಕೆಲಸ ಮಾಡುತ್ತೇವೆ ಎಂದಿದ್ದೇನೆ ಎಂದರು. ಇದನ್ನೂ ಓದಿ: ಜಾನುವಾರು ಕಳ್ಳತನ ಮಾಡಿ ಜೀವನ ಸಾಗಿಸುತ್ತಿದ್ದ ಖದೀಮರ ಬಂಧನ
Advertisement
Advertisement
ನಾನು ನೀರಾವರಿ ಮಂತ್ರಿ ಆಗಿದ್ದಾಗ ಈ ಭಾಗಕ್ಕೆ ನೀರು ಹರಿಸಲು ಪ್ರಯತ್ನಿಸಿದ್ದೇನೆ. ಜಯಂತರಾವ್ ಪಾಟೀಲ ಮತ್ತು ನಾನು ಸೇರಿಕೊಂಡು ಮಹತ್ವದ ಸಭೆ ಮಾಡಿದ್ದೆವು. ಆದರೆ, ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅದು ನೆನೆಗುದಿಗೆ ಬಿದ್ದಿದೆ. ಅಕ್ಕಲಕೋಟ, ಸೊಲ್ಲಾಪುರ ಜತ್ತ ಭಾಗಕ್ಕೆ ನಾವು ನೀರು ಕೊಡುವುದು, ಅವರು ನಮ್ಮ ಅಥಣಿಗೆ ಬೇಸಿಗೆ ಸಮಯದಲ್ಲಿ 4 ಟಿಎಂಸಿ ನೀರು ಕೊಡುವ ಬಗ್ಗೆ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಆದರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. ಮುಂದೆ ಮತ್ತೆ ನಾನೇ ನೀರಾವರಿ ಮಂತ್ರಿಯಾಗಿ ಇದನ್ನು ಸಾಕಾರಗೊಳಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಿವಳ್ಳಿ ಸ್ಪಂದನ ಸಂಘದ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಕೇಸ್ ದಾಖಲು