Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವರು ರಾಜ್ಯಪಾಲರ ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದ್ದಾರೆ: ಜಿ.ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯವರು ರಾಜ್ಯಪಾಲರ ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದ್ದಾರೆ: ಜಿ.ಪರಮೇಶ್ವರ್

Bengaluru City

ಬಿಜೆಪಿಯವರು ರಾಜ್ಯಪಾಲರ ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದ್ದಾರೆ: ಜಿ.ಪರಮೇಶ್ವರ್

Public TV
Last updated: August 2, 2024 8:44 pm
Public TV
Share
3 Min Read
g.parameshwar ramanagara
SHARE

ಬೆಂಗಳೂರು/ರಾಮನಗರ: ರಾಜ್ಯದ ಜನತೆ 136 ಸ್ಥಾನಗಳನ್ನು ಗೆಲ್ಲಿಸಿ ಆಶೀರ್ವಾದ ಮಾಡಿರುವ ಸರ್ಕಾರವನ್ನು ಬಿಜೆಪಿಯವರು ರಾಜ್ಯಪಾಲರನ್ನು ಇಟ್ಟುಕೊಂಡು ಹೆದರಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು.

ಬಿಡದಿಯಲ್ಲಿ ನಡೆದ ಕೇಂದ್ರ ಎನ್‌ಡಿಎ ಸರ್ಕಾರವು ಕರ್ನಾಟಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯ ಭ್ರಷ್ಟಚಾರದ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಪರಮೇಶ್ವರ್ ಮಾತನಾಡಿದರು.

Siddaramaiah MUDA SCAM

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ಎದುರಿಸಿದ್ದೆವು. ಜನರಿಗೆ ಭರವಸೆಗಳನ್ನು ಕೊಟ್ಟಿದ್ದೆವು‌. ಭ್ರಷ್ಟಚಾರದಿಂದ ಕೂಡಿದ್ದ ಬಿಜೆಪಿಯನ್ನು ಕಿತ್ತೊಗೆದು ನಮಗೆ ಅಧಿಕಾರ ಕೊಡಿ. ಸಾಮಾಜಿಕ ನ್ಯಾಯ ನೀಡುವ ಆಡಳಿತ ನೀಡುವುದಾಗಿ ಹೇಳಿದ್ದೆವು‌. ಬಡವರು, ಶೋಷಿತರು, ಅಲ್ಪಸಂಖ್ಯಾತರನ್ನು ಮೇಲೆತ್ತಲು ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಕಾಂಗ್ರೆಸ್ ಪಕ್ಷ ಪೊಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಬಿಜೆಪಿಯವರು ಟೀಕಿಸಿದ್ದರು. ಅಧಿಕಾರಕ್ಕೆ ಬಂದ ಕೂಡಲೇ ಭರವಸೆಗಳನ್ನು ಈಡೇರಿಸಿದ್ದೇವೆ. ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಕಾರ್ಯಗಳೆಲ್ಲವು ಸುಸಜ್ಜಿತವಾಗಿ ನಡೆಯುತ್ತಿವೆ. ಇದೆಲ್ಲವನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್‌ನವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹರಿಹಾಯ್ದರು.

ಜನ 136 ಸೀಟುಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತವನ್ನು ನೀಡುತ್ತಿದೆ. ಇದೆಲ್ಲವನ್ನು ತಡೆಯಲು ಆಗದೆ ಹೊಟ್ಟೆಕಿಚ್ಚು, ಹೊಟ್ಟೆ ಹುರಿಯಿಂದ ಬಿಜೆಪಿಯವರು ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ‌ ಪಕ್ಷ 136 ಸೀಟು ಗೆದ್ದಿದ್ದಕ್ಕೆ, ರಾಜ್ಯದಲ್ಲಿ ನಮಗೆ ಜಾಗ ಇಲ್ಲ ಎಂದು ಜೆಡಿಎಸ್ ಮತ್ತು ಬಿಜೆಪಿಯವರಿಗೆ ಎಂಬುದು ಗೊತ್ತಾಗಿದೆ. ಇದೇ ಕಾರಣದಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯೊಂದಿಗೆ ಕೈಜೋಡಿಸಿದ ಹೆಚ್‌.ಡಿ.ಕುಮಾರಸ್ವಾಮಿ ಅವರು ಲಾಟ್ರಿ ಹೊಡೆದು, ಕೇಂದ್ರ ಸಚಿವರಾಗಿದ್ದಾರೆ. ನಮ್ಮ ಜೊತೆ ಸೇರಿಕೊಂಡು 14 ತಿಂಗಳ ನಂತರ ಬಿಟ್ಟು ಹೋದರು‌. ಮುಂದೆ ಬಿಜೆಪಿಯವರಿಗೆ ಗೊತ್ತಾಗಲಿದೆ. ನಿನ್ನೆ ನಡೆದ ಘಟನೆಯೇ ಇದಕ್ಕೆ ಸಾಕ್ಷಿ. ದಾರಿಯಲ್ಲಿ ಎಲ್ಲೂ ಜನತಾದಳ ಬಾವುಟಗಳು ಇಲ್ಲ. ಹೆಚ್ಚು ದಿನ ಅವರ ಮೈತ್ರಿ ಉಳಿಯುವುದಿಲ್ಲ. ಶೀಘ್ರವಾಗಿ ಮುರಿದು ಬೀಳುತ್ತದೆ ಎಂದು ಟೀಕಿಸಿದರು.

1935ರಲ್ಲಿ ಖರೀದಿ ಮಾಡಿದಂಥ ಜಮೀನನ್ನು ಮುಡಾದವರು ನಿವೇಶನ ಮಾಡಿದ್ದನ್ನು ಈಗ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಒಂದೇ‌ ಒಂದು ಫೈಲ್‌ನಲ್ಲಿ ಸಹಿ ಮಾಡಿದ್ದರೆ, ಈ ಬಗ್ಗೆ ನಿರ್ದೇಶನ ನೀಡಿದ್ದರೆ ಬಿಜೆಪಿಯವರು ಸಾಬೀತುಪಡಿಸಲಿ. ಜನರಿಗೆ ಸತ್ಯವನ್ನು ತಿಳಿಸಬೇಕು ಎಂಬ ಉದ್ದೇಶದಿಂದ ಸಭೆ ನಡೆಸಿದ್ದೇವೆ. ಬಿಜೆಪಿಯವರ ಅಧಿಕಾರವಧಿಯಲ್ಲಿ ನಡೆದ ಹಗರಣಗಳ‌ ಪಟ್ಟಿಯನ್ನು ನೀಡುತ್ತೇವೆ‌. ಅವರಿಗೆ ಸಾಧ್ಯವಾದರೆ ಪಟ್ಟಿ ನೀಡಲಿ ಎಂದು ಪರಮೇಶ್ವರ್ ಸವಾಲು ಹಾಕಿದರು.

ಕೋವಿಡ್ ಸಂದರ್ಭದಲ್ಲಿ ಜನರಿಗೆ ನೀಡಿದ ಔಷಧಿಯಲ್ಲಿ ಸುಧಾಕರ್ ನಾಲ್ಕು ಸಾವಿರ ಕೋಟಿ ರೂ. ದುಡ್ಡು ಹೊಡೆದಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು. ಭೋವಿ ನಿಗಮದಲ್ಲಿ 47 ಕೋಟಿ ರೂ. ಹಗರಣ ಆಗಿದೆ ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ದೇವರಾಜು ಅರಸ್ ಟ್ರಕ್ ಟರ್ಮಿನಲ್‌ನಲ್ಲಿ ಡಿ.ಎಸ್.ವೀರಯ್ಯ ಚೆಕ್ ಮೂಲಕ ದುಡ್ಡು ತೆಗೆದುಕೊಂಡು ಮನೆ ಕಟ್ಟಿಸಿಕೊಂಡಿದ್ದಾರೆ. ಸಾವಿರಾರು ಕೋಟಿ ರೂ. ಲೂಟಿ ಹೊಡೆದು ಸಿದ್ದರಾಮಯ್ಯ ಅವರ ಮೇಲೆ ಆರೋಪ‌ ಮಾಡುವುದಕ್ಕೆ ನಾಚಿಕೆ ಆಗುವುದಿಲ್ಲವೆ ಎಂದು ಹರಿಹಾಯ್ದರು.

ಟಿ.ಜೆ.ಅಬ್ರಹಾಂ ಜುಲೈ 26ರಂದು ಗವರ್ನರ್‌ಗೆ ದೂರು ಕೊಟ್ಟಿದ್ದ. ಈ ಕುರಿತು ಸರ್ಕಾರದ ಮುಖ್ಯ ಆಯುಕ್ತರು ರಾಜ್ಯಪಾಲರಿಗೆ ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ ಕೂಡಲೇ ಹೆದರಿಸುತ್ತೀರ? ಇತಿಹಾಸದಲ್ಲಿ ಇಲ್ಲದ ಶೋಕಾಸ್ ನೋಟಿಸ್ ನೀಡುತ್ತೀರ? ನೀವು ಮಾಡುತ್ತಿರುವುದು ತಪ್ಪು, ನೋಟಿಸ್ ವಾಪಸ್ ಪಡೆಯುವಂತೆ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಸರ್ಕಾರದಲ್ಲಿ ಯಾರು ಸಹ ತಪ್ಪು ಮಾಡಿಲ್ಲ. ಮುಂದಿನ ನಾಲ್ಕು ವರ್ಷವೂ ಸ್ವಚ್ಛವಾದ ಆಡಳಿತವನ್ನು ನೀಡುತ್ತೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಇದೇ‌ ವೇಳೆ ಪರಮೇಶ್ವರ್ ಹೇಳಿದರು.

TAGGED:G Parameshwarramanagarasiddaramaiahಜಿ.ಪರಮೇಶ್ವರ್ರಾಮನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
36 minutes ago
Yadagiri Death
Districts

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Public TV
By Public TV
1 hour ago
Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
2 hours ago
DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
2 hours ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?