ಬೆಂಗಳೂರು: ರಾಜಕೀಯದಲ್ಲಿ ಧರ್ಮವಿರಬೇಕೆ ಹೊರತು ಧರ್ಮದಲ್ಲಿ ರಾಜಕಾರಣವಿರಬಾರದು. ಬಿಜೆಪಿಯವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ರಾಜಕೀಯಕ್ಕೆ ಧರ್ಮಸ್ಥಳವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಇದನ್ನೂ ಓದಿ: ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ
ಕೆ.ಆರ್ ಪುರದಿಂದ ಮೇಖ್ರಿ ಸರ್ಕಲ್‌ಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ವಿಸ್ತರಿತ ಮೇಲ್ಸೆತುವೆಯನ್ನು ಸೋಮವಾರ (ಇಂದು) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ರಾಜಕೀಯದಲ್ಲಿ ಧರ್ಮವಿರಬೇಕೆ ಹೊರತು ಧರ್ಮದಲ್ಲಿ ರಾಜಕಾರಣವಿರಬಾರದು. ಬಿಜೆಪಿಯವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ರಾಜಕೀಯಕ್ಕೆ ಧರ್ಮ ಬಳಸಿಕೊಳ್ಳುತ್ತಿದ್ದಾರೆ. ಎಸ್‌ಐಟಿ ಸರ್ಕಾರಕ್ಕೆ ವರದಿ ಸಲ್ಲಿಸುವ ಬಗ್ಗೆ ಗೃಹ ಸಚಿವರು ಉತ್ತರಿಸುತ್ತಾರೆ ಎಂದರು.
ಇನ್ನೂ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲು ಈ ಫ್ಲೈಓವರ್ ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಪ್ಲಾನ್ ಆಗಿತ್ತು. ಕಾರ್ಯರೂಪಕ್ಕೆ ಬಂದಿರಲಿಲ್ಲ. ನಾನು ಬಂದ ಮೇಲೆ ಹಣ ಕೊಟ್ಟು, ಅನುಮತಿ ನೀಡಿದೆ. 180 ಕೋಟಿ ರೂ. ವೆಚ್ಚದಲ್ಲಿ ಈ ಫ್ಲೈಓವರ್ ಮಾಡಲಾಗಿದೆ. ಇನ್ನೊಂದು ಜಂಕ್ಷನ್ ರೋಡ್ ಮಾಡಲಾಗುತ್ತದೆ. 6 ಲೇನ್ ನವೆಂಬರ್ ಒಳಗೆ ಆಗುತ್ತದೆ. 3 ತಿಂಗಳಲ್ಲಿ ಇನ್ನೊಂದು ಲೂಪ್ ಬರಲಿದೆ. ಎಸ್ಟಿಮ್ ಮಾಲ್‌ನಿಂದ ಒಂದೂವರೆ ಕಿ.ಮೀ ತನಕ ಟನಲ್ ಮಾಡಲಾಗುತ್ತದೆ. ಎಮೆರ್ಜೆನ್ಸಿಗೆ ಇದರ ಬಳಕೆಯಾಗುತ್ತದೆ. ಏರ್ಪೋರ್ಟ್ನಿಂದ ಬರುವವರಿಗೆ ಅನುಕೂಲವಾಗಲಿದೆ. ಟನಲ್ ಯೋಜನೆಗೆ ಹೊಸ ಟೆಂಡರ್ ಸದ್ಯದಲ್ಲಿಯೇ ಶುರುವಾಗುತ್ತದೆ ಎಂದು ಹೇಳಿದ್ದಾರೆ. ಉದ್ಘಾಟನೆ ವೇಳೆ ನಟಿ ರಮ್ಯಾ, ಸಚಿವ ಬೈರತಿ ಸುರೇಶ್ ಭಾಗಿಯಾಗಿದ್ದರು.ಇದನ್ನೂ ಓದಿ: ಪಶ್ಚಿಮ ಬಂಗಾಳ | ಶಾಲೆಯ ಬಳಿಯೇ ಬಾಂಬ್ ಸ್ಫೋಟ – ಓರ್ವ ಸಾವು