ನವದೆಹಲಿ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಚುನಾವಣೆಯ ದಿನಾಂಕನ್ನು ಆಯೋಗ ಪ್ರಕಟಿಸುವ ಮೊದಲೇ ಟ್ವೀಟ್ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಮಾಳವೀಯ ಮೇ 12 ರಂದು ಚುನಾವಣೆ ನಡೆದರೆ, ಮೇ 18 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಇಂದು ಬೆಳಗ್ಗೆ 11 ಗಂಟೆ 8 ನಿಮಿಷಕ್ಕೆ ಟ್ವೀಟ್ ಮಾಡಿದ್ದರು. ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸುವ ಮೊದಲೇ ಮಾಳವೀಯ ದಿನಾಂಕವನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ.
Advertisement
ಮಾಳವೀಯ ಟ್ವೀಟ್ ವಿಚಾರವನ್ನು ಮುಂದಿಟ್ಟುಕೊಂಡು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯುಕ್ತ ರಾವತ್ ಅವರನ್ನು ವರದಿಗಾರರು ಪ್ರಶ್ನೆ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವುದಾಗಿ ತಿಳಿಸಿದ ರಾವತ್ ಮಾಹಿತಿ ಸೋರಿಕೆ ಎಲ್ಲಿ ಆಗಿದೆ ಎನ್ನುವುದನ್ನು ಪತ್ತೆ ಹಚ್ಚುತ್ತೇವೆ ಎಂದು ತಿಳಿಸಿದರು.
Advertisement
ವಿವಾದ ಜೋರಾಗುತ್ತಿದ್ದಂತೆ ಮಾಳವೀಯ ಈ ಹಿಂದೆ ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಕರ್ನಾಟಕ ಚುನಾವಣೆ ಮೇ 12 ರಂದು ಒಂದೇ ಹಂತದಲ್ಲಿ ನಡೆದರೆ ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಮೇ 12ರಂದು ಕರ್ನಾಟಕ ಚುನಾವಣೆ- ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ