ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ಮತ್ತೆ ಪ್ರಾರಂಭವಾಗಿದೆ. ಸೆಪ್ಟೆಂಬರ್ 8ಕ್ಕೆ ನಿಂತು ಹೋಗಿದ್ದ ಜನೋತ್ಸವ ನಡೆಯಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಇದನ್ನೂ ಓದಿ: ಮಧ್ಯಾಹ್ನ ಮಾಂಸಾಹಾರ ತಿಂದು ಸಂಜೆ ದೇವಸ್ಥಾನಕ್ಕೆ ಹೋಗಬಾರದಾ : ಸಿದ್ದರಾಮಯ್ಯ ಪ್ರಶ್ನೆ
Advertisement
Advertisement
ಮಾಜಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಎಲ್ಲಾ ನಾಯಕರು, ಸಚಿವರು, ಶಾಸಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. 3 ಜಿಲ್ಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 2 ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
Advertisement
Advertisement
ಜನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳು ಕೂಡ ಭಾಗಿಯಾಗಲಿದ್ದಾರೆ. ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಅಭಿನಂದಿಸಲು ಬರಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್