– 5 ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇದೆ, 4 ಕ್ಷೇತ್ರ ಬಿಟ್ಟುಕೊಡಲು ಒಪ್ಪಿದ್ದಾರೆ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ನರೇಂದ್ರ ಮೋದಿ (Narendra Modi) ಅವರನ್ನ ಭೇಟಿಯಾಗಿ ಲೋಕಸಭೆಯಲ್ಲಿ ಹೊಂದಾಣಿಕೆಗೆ ತೀರ್ಮಾನ ಮಾಡಿದ್ದಾರೆ. ಇದನ್ನ ಸ್ವಾಗತ ಮಾಡ್ತೇನೆ. ಆದಷ್ಟು ಬೇಗ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನ ಭೇಟಿ ಮಾಡ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಕಾಂಗ್ರೆಸ್ ಮೈತ್ರಿ (BJP-JDS Alliance) ವಿಚಾರವಾಗಿ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಮೈತ್ರಿಗೆ ಸ್ವಾಗತ ಮಾಡ್ತಿನಿ. ಜೆಡಿಎಸ್ 5 ಕ್ಷೇತ್ರಗಳಿಗೆ ಬೇಡಿಕೆಯಿಟ್ಟಿದೆ. ಆದ್ರೆ ಅಮಿತ್ ಶಾ (Amit Shah) ನಾಲ್ಕು ಕ್ಷೇತ್ರಗಳನ್ನ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಯಾವ ಕ್ಷೇತ್ರಗಳನ್ನ ಬಿಟ್ಟುಕೊಡಬೇಕು ಎನ್ನುವ ಬಗ್ಗೆ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಎಲ್ಲವೂ ಅವರಿಗೇ ಗೊತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಈ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭವಾಗಿದೆ. ನಾನೂ ಕೂಡ ಸೆಪ್ಟೆಂಬರ್ 16ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ. ಕುರುಡುಮಲೈ ವಿನಾಯಕನ ಪೂಜೆ ಮಾಡಿ ಪ್ರವಾಸ ಆರಂಭಿಸ್ತೇವೆ, ಪ್ರತಿ ಜಿಲ್ಲೆಗಳಿಗೂ ಪ್ರವಾಸ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡ್ತೇವೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: HAL ಜೊತೆಗೂಡಿ ಫೈಟರ್ ಜೆಟ್ ಎಂಜಿನ್ ತಯಾರಿಕೆ & ನಾಗರಿಕ ಪರಮಾಣು ತಂತ್ರಜ್ಞಾನದ ಬಗ್ಗೆ ಮೋದಿ-ಬೈಡನ್ ಚರ್ಚೆ
Web Stories