ಬೆಂಗಳೂರು/ ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ(Taluk Panchayat Election) ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ (JDS-BJP) ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ರಾಜ್ಯ ಬಿಜೆಪಿ ಉಸ್ತುವಾರಿಗಳಾದ ರಾಧಾಮೋಹನ್ ದಾಸ್ ಅಗರ್ವಾಲ್ (Radha Mohan Das) ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ (NDA) ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವರಾದ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಲಿದ್ದಾರೆ.ಈಗಾಗಲೇ ಗೃಹ ಸಚಿವರು ಸೋಮವಾರ ತಮ್ಮನ್ನು ಭೇಟಿಯಾಗುವಂತೆ ನಿಖಿಲ್ ಅವರಿಗೆ ಸಮಯ ನೀಡಿದ್ದು,ಅದಕ್ಕೆ ಪೂರ್ವಭಾವಿಯಾಗಿ ಅವರು ನವದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 694 ಕೋಟಿ ಅನುದಾನ ಬಿಡುಗಡೆಗೆ ಸಂಪುಟ ಅಸ್ತು!
Advertisement
Advertisement
ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ. ಜನತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ. ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದು ನಿಖಿಲ್ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ.