ಬಿಜೆಪಿ, ಜೆಡಿಎಸ್ ಮೈತ್ರಿ? – ಶಾ, ಹೆಚ್‌ಡಿಡಿ ಸಭೆಯ ಇನ್‌ಸೈಡ್‌ ಸ್ಟೋರಿ

Public TV
1 Min Read
hd devegowda and amit shah

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ (BJP-JDS) ಮೈತ್ರಿ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೆ (Lok Sabha Election) ದಾಳ ಉರುಳಿಸಿರುವ ದಳಪತಿಗಳು, ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ.

ಮೂಲಗಳ ಪ್ರಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು (HD Devegowda) ಭೇಟಿ ಮಾಡಿದ್ದಾರೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ (Prajwal Revanna) ಅವರ ಕೋರ್ಟ್ ಕೇಸ್ ಗೆ ಸಂಬಂಧಿಸಿದಂತೆ ವಕೀಲರ ಭೇಟಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಒಂದೇ ಮನೆಯಲ್ಲಿ ವಾಸ ಮಾಡ್ತಿದ್ದಾರೆ ವಿಜಯ್, ರಶ್ಮಿಕಾ- ಸಿಕ್ತು ಮತ್ತೊಂದು ಪ್ರೂಫ್

 

ಏನು ಚರ್ಚೆ ನಡೆದಿದೆ?
ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್‌ಗೆ ಹೆಚ್ಚು ಶಕ್ತಿಯಿದೆ. ಈ ಭಾಗದಲ್ಲಿ ಬಿಜೆಪಿ ಕೈ ಜೋಡಿಸಬೇಕು. ಉಳಿದ ಕಡೆ ನಿಮಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ. ದೇವೇಗೌಡರ ಬೇಡಿಕೆಗೆ ಒಪ್ಪಿಗೆ ಸಿಕ್ಕಿದರೆ ಸೆ.10ರ ಸಮಾವೇಶದ ಬಳಿಕ ಜೆಡಿಎಸ್‌ ನಿರ್ಧಾರ ಪ್ರಕಟವಾಗಲಿದೆ.

 

Web Stories

Share This Article