ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ (JDS) -ಬಿಜೆಪಿ (BJP) ಮೈತ್ರಿ ವಿಚಾರವಾಗಿ ಸಂಸದ ಮುನಿಸ್ವಾಮಿ (Muniswamy) ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಒಪ್ಪಿ ಬಂದವರಿಗೆ ಕೋಲಾರ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರವನ್ನು ಜೆಡಿಎಸ್ ಅವರು ಕೇಳಿದ್ದಾರೆ ಎನ್ನುವ ಚರ್ಚೆ ಮಾಧ್ಯಮಗಳಲ್ಲಿ ಆಗುತ್ತಿದೆ. ಈ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದು ಎಲ್ಲರೂ ಬೆಂಬಲ ನೀಡುತ್ತಿದ್ದಾರೆ. ಈ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ. ದೇಶದ ಭವಿಷ್ಯಕ್ಕಾಗಿ ಕ್ಷೇತ್ರವನ್ನು ಬಿಟ್ಟು ಕೊಡಲು ನಾನು ತಯಾರಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೊಡ್ಡಗೌಡ್ರು ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿರೋದು ಸಂತೋಷ: ಬಿಎಸ್‌ವೈ
ನನ್ನ ರಾಜಕೀಯ ಭವಿಷ್ಯದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಪಕ್ಷ ನನ್ನನ್ನು ಕೈ ಬಿಡುವುದಿಲ್ಲ. ಜೆಡಿಎಸ್‍ನವರು ಸಹ ಬಿಜೆಪಿ ಜೊತೆಗೆ ಇದ್ದಾರೆ. ಅದಕ್ಕಾಗಿ ನಾನು ಸೀಟು ಬಿಟ್ಟು ಕೊಡುವ ವಿಚಾರದಲ್ಲಿ ಬೇಸರ ಆಗುವುದಿಲ್ಲ. ಎರಡು ಪಕ್ಷಗಳಲ್ಲೂ ಹೊಂದಾಣಿಕೆ ಆಗಲಿದೆ ಎಂದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ (Congress) ವಿರುದ್ಧ ಹರಿಹಾಯ್ದ ಅವರು, ಗ್ಯಾರಂಟಿ ಆಧಾರದ ಮೇಲೆ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಗೆದ್ದಿದೆ. ಜನ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಿಜೆಪಿ ಗೆಲ್ಲಲಿದೆ. ಮೋದಿ ಮತ್ತೆ ದೇಶದ ಪ್ರಧಾನಿಯಾಗಿ ಆಯ್ಕೆ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಸೆ.16 ರಂದು ಪಕ್ಷ ಸಂಘಟನೆ ದೃಷ್ಟಿಯಿಂದ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷದ ನಾಯಕರು ಮುಳಬಾಗಿಲಿನ ಕುರುಡುಮಲೆ ವಿನಾಯಕನಿಗೆ ಪೂಜೆ ಸಲ್ಲಿಸಿ ಪ್ರವಾಸಕ್ಕೆ ಚಾಲನೆ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಾನು 5 ಕೋಟಿ ರೂ. ಕೊಡ್ತೀನಿ ಕಾಂಗ್ರೆಸ್ ನಾಯಕರು ಆತ್ಮಹತ್ಯೆ ಮಾಡಿಕೊಳ್ತಾರಾ? ಯತ್ನಾಳ್ ಟಾಂಗ್
Web Stories