– ಸ್ವಪಕ್ಷದ ವಿರುದ್ಧವೇ ಮಾಜಿ ಸಚಿವ ಗುಡುಗು
ಚಿತ್ರದುರ್ಗ: ಬಿಜೆಪಿ, ಜೆಡಿಎಸ್ ಮೈತ್ರಿ (Alliance) ಕೇವಲ ರಾಷ್ಟ್ರೀಯ ನಾಯಕರ ಮಧ್ಯೆ ಚರ್ಚೆ ಆಗಿದೆ. ಆದರೆ ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ದರೆ ಎರಡು ಪಕ್ಷಗಳ ಮಧ್ಯೆ ಸಂಘರ್ಷವಾಗಲಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ರೇಣುಕಾಚಾರ್ಯ (MP Renukacharya) ಭವಿಷ್ಯ ನುಡಿದಿದ್ದಾರೆ.
ಚಿತ್ರದುರ್ಗದ (Chitradurga) ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ರೇಣುಕಾಚಾರ್ಯ ಮಾತನಾಡಿದರು. ನಿನ್ನೆಯಷ್ಟೇ ಸ್ವಪಕ್ಷಿಯರ ವಿರುದ್ಧ ಮಾಜಿ ಸಚಿವ ಸೋಮಣ್ಣ ಗುಡುಗಿದ್ದರು. ಇದರ ಬೆನ್ನಲ್ಲೆ ಬಿಜೆಪಿ ನಾಯಕರ ವಿರುದ್ಧ ಮತ್ತೋರ್ವ ಮಾಜಿ ಸಚಿವ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಅವರಲ್ಲಿರುವ ಅಸಮಾಧಾನವನ್ನು ಹೊರಹಾಕಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಕೇವಲ ರಾಷ್ಟ್ರೀಯ ನಾಯಕರ ಮಧ್ಯೆ ಚರ್ಚೆ ಆಗಿದೆ. ಮೈತ್ರಿ ಎಂದರೆ ಕಾರ್ಯಕರ್ತರ ಮಧ್ಯೆ ಸಾಮರಸ್ಯವಿರಬೇಕು. ಆದರೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಸಂಘರ್ಷವಿದೆ. ಈ ಮೈತ್ರಿ ಬೂತ್ ಮಟ್ಟ ಹಾಗೂ ಗ್ರಾಮಾಂತರ ಮಟ್ಟದಲ್ಲಿ ಆಗಬೇಕು. ಈ ಹಿಂದೆ ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟುಕೊಡದೇ ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ ಎಂದರು.
ನಮ್ಮ ರಾಜ್ಯ ನಾಯಕರು, ಯಡಿಯೂರಪ್ಪ ಅವರನ್ನು ಹೊರಗಿಟ್ಟು ಮಾಡಿಕೊಳ್ಳಯವ ಮೈತ್ರಿ ಅಪೂರ್ಣವಾಗಲಿದೆ. ಯಡಿಯೂರಪ್ಪ ಮತ್ತು ರಾಜ್ಯನಾಯಕರನ್ನು ಕತ್ತಲಕೋಣೆಯಲ್ಲಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮೈತ್ರಿ ಮಾಡಿಕೊಳ್ಳೋದು ಸರಿಯಲ್ಲ. ಹಾಗೆಯೇ ಇಂತಹ ಮೈತ್ರಿ ಸಾಮರಸ್ಯ ಆಗಲ್ಲ. ಇದು ಇನ್ನಷ್ಟು ಸಂಘರ್ಷಕ್ಕೆ ದಾರಿಯಾಗಲಿದೆ ಎಂದು ತಿಳಿ ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ಬಂದ್ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ: ಚಕ್ರವರ್ತಿ ಸೂಲಿಬೆಲೆ
ಕಾರ್ಯಕರ್ತರ ವಿಶ್ವಾಸವನ್ನೇ ತೆಗೆದುಕೊಳ್ತಿಲ್ಲ. ಇಂತಹ ಬಿಜೆಪಿ, ಜೆಡಿಎಸ್ ಮೈತ್ರಿ ಎಷ್ಟರಮಟ್ಟಿಗೆ ಯಶಸ್ವಿ ಆಗುತ್ತದೆ? ಇನ್ನು ಮೈತ್ರಿ ಎರಡನೇ ಭಾಗ. ಈ ವರೆಗೆ ರಾಜ್ಯಾಧ್ಯಕ್ಷರು ಮತ್ತು ವಿಪಕ್ಷ ನಾಯಕರ ಆಯ್ಕೆಯೇ ಆಗಿಲ್ಲ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತಾಡುತ್ತಿದ್ದಾರೆ. ಬೇರೆಯವರಿಗೆ ಟೀಕೆ ಮಾಡಲು ನಮಗೆ ಯಾವ ನೈತಿಕತೆ ಇದೆ? ಮೊದಲು ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆ ಲೋಕಸಭೆ ಚುನಾವಣೆ ಪೂರ್ವದಲ್ಲೇ ಆಗಬೇಕು ಎಂದು ಒತ್ತಾಯಿಸಿದರು.
ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗುವ ಅಪೇಕ್ಷೆ ಹೇಳಿದ್ದೇನೆ. ಆದರೆ ಪಕ್ಷದ ನಾಯಕರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ. ನಾನು ಸಂಘಟನೆಯಿಂದ ಬಂದವನು. ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ. ಆದರೂ ನಮ್ಮದೇ ಪಕ್ಷದ ಕೆಲವರು ಹಾಗೇ ಅಪಪ್ರಚಾರ ಮಾಡುತ್ತಿದ್ದು, ವಿಧಾನಸಭೆಯಲ್ಲೂ ಕೂಡಾ ಬಿಜೆಪಿ ಸೋಲಿಗೆ ನಮ್ಮ ನಾಯಕರ ದೌರ್ಬಲ್ಯವೇ ಕಾರಣ ಎಂದು ಬಿಜೆಪಿ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ:ಪ್ರಯಾಣಿಕರಿಗೆ ಗುಡ್‌ನ್ಯೂಸ್- ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]