ಬೆಳಗಾವಿ: ಮೇ ಬಳಿಕ ಸರ್ಕಾರ ಪತನ ಎಂಬ ಹೆಚ್‌ಡಿಕೆ (HD Kumaraswamy) ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ -ಜೆಡಿಎಸ್‌ನವರು ಪಾಪ ನೀರಿನಿಂದ ತೆಗೆದ ಮೀನಿನ ರೀತಿ ವಿಲಿವಿಲಿ ಎಂದು ಒದ್ದಾಡುತ್ತಿದ್ದಾರೆ. ಅವರು ಭ್ರಮಾ ಲೋಕದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆ ಪ್ರಸ್ತಾಪಿಸಿದರೂ ಉತ್ತರ ಕೊಡೋಕೆ ಸರ್ಕಾರ ತಯಾರಿದೆ. ನಾವು ಯಾವುದಕ್ಕೂ ವಿಳಂಬ ಮಾಡೋದಾಗಲಿ, ಕಾಲಹರಣ ಮಾಡಲ್ಲ. ಇವತ್ತು ಬರಗಾಲದ ಬಗ್ಗೆ ಚರ್ಚೆಯಾಗುತ್ತಿದ್ದು, ಉತ್ತರ ಕೊಡುತ್ತಿದ್ದೇವೆ. ನಾಳೆಯಿಂದ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ವಿಷಯ ಪ್ರಸ್ತಾಪ ಆಗಿದೆ ಎಂದರು. ಇದನ್ನೂ ಓದಿ: Article 370: ಶೇಕ್ ಅಬ್ದುಲ್ಲಾ ಖುಷಿಪಡಿಸಲು ಜಾರಿಗೆ ತಂದಿದ್ದನ್ನು ಮೋದಿ ಧೈರ್ಯದಿಂದ ರದ್ದು ಮಾಡಿದ್ರು: ಯತ್ನಾಳ್
ಬಿಜೆಪಿ (BJP) ನಾಯಕರ ಸಮನ್ವಯ ಕೊರತೆಯಿಂದ ಕಲಾಪದ ಸಮಯ ವ್ಯರ್ಥ ಆರೋಪ ವಿಚಾರದ ಕುರಿತು ಮಾತನಾಡಿದ ಅವರು, ಬಿಜೆಪಿಯವರಿಗೆ ಯಾವತ್ತೂ ಸಮನ್ವಯ ಇಲ್ಲ. ಅವರು ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದವರು. ಬಳಿಕ ಸೋತಿದ್ದಾರೆ, ಜನ ತಿರಸ್ಕರಿಸಿದ್ದಾರೆ. ಇದಾದ ಮೇಲೆ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅಲ್ಲಿ ಎರಡು ಗುಂಪು, ಮೂರು ಗುಂಪುಗಳು ಇದ್ದಾವೆ ಎಂದು ಹೇಳಿದರು. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ
ಇದೇ ವೇಳೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಏನೇ ಅಪರಾಧ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರ ಅಧಿವೇಶನ ಬಳಿಕ ಬೆಂಗಳೂರಲ್ಲಿ ಕರೆದು ಮಾತನಾಡೋದಾಗಿ ಅವರ ನಾಯಕರಿಗೆ ಹೇಳಿದ್ದೇನೆ. ಬೆಳಗಾವಿಯಲ್ಲಿ ಸಮಯ ಇರೋದಿಲ್ಲ. ನಾನು ಪಂಚಮಸಾಲಿ ನಾಯಕರು, ಸ್ವಾಮೀಜಿ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: `ದಳಪತಿ’ಗಳಿಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ ಬಣ- ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ