ತುಮಕೂರು: ಬಿಜೆಪಿ, ಜೆಡಿಎಸ್ ಪಕ್ಷದವರು ಒಟ್ಟಾಗಿ, ರಾಜ್ಯ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಗಾಪುರದಲ್ಲಿ ಕುಳಿತು ಆಪರೇಷನ್ ಮಾಡುತ್ತಿರುವ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಚೆನ್ನಾಗಿ ಗೊತ್ತಿದೆ. ಎಲ್ಲವನ್ನೂ ಅವರೇ ನಿಭಾಯಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಆಗಸ್ಟ್ 1 ರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿಷೇಧ – ಅಲೋಕ್ ಕುಮಾರ್
ವಿರೋಧ ಪಕ್ಷದವರು ಏನೇ ಷಡ್ಯಂತ್ರ ಮಾಡಿದರೂ ನಡೆಯುವುದಿಲ್ಲ. ನಮ್ಮ ಪಕ್ಷದ ಶಾಸಕರು ಒಟ್ಟಾಗಿದ್ದೇವೆ. ಐದು ವರ್ಷ ಆಡಳಿತ ನೀಡುತ್ತೇವೆ. ಸರ್ಕಾರದ ಮೇಲೆ ಯಾವುದೇ ಆತಂಕ ಕಾಡುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್ ಮೋದಿ – ಪ್ರಧಾನಿಗೆ ರಾಹುಲ್ ಗಾಂಧಿ ತಿರುಗೇಟು
ಸಚಿವರ ಮೇಲೆ ಅಸಮಾಧಾನಗೊಂಡ ಶಾಸಕರು, ಮುಖ್ಯಮಂತ್ರಿಗೆ ಪತ್ರ ಬರೆದಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ನಮ್ಮಲ್ಲಿ ಯಾವ ಅಸಮಾಧಾನವೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ – ಸಿಎಂ ಎಚ್ಚರಿಕೆ
ಕೋವಿಡ್ ಸಮಯದಲ್ಲಿ ಔಷಧಿ, ಸಲಕರಣೆ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಅವ್ಯವಹಾರ ನಡೆದಿರುವುದನ್ನು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯೇ ಗುರುತಿಸಿದೆ. ಅಕ್ರಮದ ಬಗ್ಗೆ ತನಿಖೆ ನಡೆಸಿದರೆ ದ್ವೇಷದ ರಾಜಕಾರಣ ಹೇಗಾಗುತ್ತದೆ ಎಂದು ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ
Web Stories