ಬೆಂಗಳೂರು: ಬಿಜೆಪಿ-ಜೆಡಿಎಸ್‌ನ ಯಾವುದೇ ಶಾಸಕರು ಕಾಂಗ್ರೆಸ್ (Congress) ಸೇರೋದಿಲ್ಲ ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ (N Ravikumar) ತಿಳಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ದುರಾಡಳಿತವನ್ನು ಮುಚ್ಚಿ ಹಾಕಿಕೊಳ್ಳೋಕೆ ಇಂತಹ ವಿಷಯ ಪ್ರಸ್ತಾಪ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂದು ಕಾಂಗ್ರೆಸ್‌ನವರು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್‌ನವರು ಮೊದಲು ಸಿಎಂ ಚೇರ್ ಉಳಿಸಿಕೊಳ್ಳೋದು ನೋಡಲಿ ಅಂತ ತಿರುಗೇಟು ಕೊಟ್ಟರು. ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಸಿಎಂ, ಡಿಸಿಎಂ ರಾಜೀನಾಮೆ ಕೊಡ್ಬೇಕು: ರವಿಕುಮಾರ್
Advertisement
ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸಿಎಂ ಕುರ್ಚಿಗೆ ಕಿತ್ತಾಟ ಮಾಡುತ್ತಿದ್ದಾರೆ. ಮೊದಲು ಅದನ್ನು ಸರಿಮಾಡಿಕೊಳ್ಳಿ. ಮೊದಲು ನಿಮ್ಮ ಶಾಸಕರ ಬೇಡಿಕೆ ಈಡೇರಿಸಿ. ಮೊದಲು ನಿಮ್ಮ ಶಾಸಕರಿಗೆ ಅನುದಾನ ಕೊಡಿ. ಕಾಂಗ್ರೆಸ್ ಶಾಸಕರೇ ಈ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಅವರನ್ನ ಸಮಾಧಾನ ಮಾಡೋ ಕೆಲಸ ಕಾಂಗ್ರೆಸ್ ಮಾಡಲಿ. ಆಮೇಲೆ ನಮ್ಮ ಶಾಸಕರ ಬಗ್ಗೆ ಯೋಚನೆ ಮಾಡಲಿ. ಬಿಜೆಪಿ-ಜೆಡಿಎಸ್‌ನ ಯಾವ ಶಾಸಕರು ಕಾಂಗ್ರೆಸ್ ಹೋಗೋದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: Kolar | ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಕಳ್ಳತನಕ್ಕೆ ಯತ್ನ – ಇಬ್ಬರು ಅರೆಸ್ಟ್
Advertisement
Advertisement
ಜೆಡಿಎಸ್ ಎಂಎಲ್‌ಸಿ ಶರವಣ ಮಾತನಾಡಿ, ಕಾಂಗ್ರೆಸ್ ಅವರು ತಿರುಕನ ಕನಸು ಕಾಣುತ್ತಿದ್ದಾರೆ. ಸಿಎಂ-ಡಿಸಿಎಂ ನಡುವೆ ಸಿಎಂಗಾಗಿ ಫೈಟ್ ನಡೆಸುತ್ತಿದ್ದಾರೆ. ಅದನ್ನ ಮುಚ್ಚಿ ಹಾಕೋಕೆ ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ಪಕ್ಷ ಅಂದ ಮೇಲೆ ಸಣ್ಣಪುಟ್ಟ ಗಂಡ-ಹೆಂಡತಿ ಜಗಳ ಇರುತ್ತೆ. ರಾತ್ರಿ ಕಳೆದು ಬೆಳಗ್ಗೆ ಸರಿ ಆಗುತ್ತೆ. ಸಣ್ಣಪುಟ್ಟ ಸಮಸ್ಯೆ ಇದ್ದರೆ ನಮ್ಮ ವರಿಷ್ಠರು ನೋಡಿಕೊಳ್ಳುತ್ತಾರೆ. ಯಾರೂ ಪಕ್ಷ ಬಿಟ್ಟು ಹೋಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಪ್ರಸಾದ ತಯಾರಿಸಿದ ಅದಾನಿ
Advertisement