ಬೆಂಗಳೂರು: ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದೆ, ನನಗೆ ಕಳವಳ ಆಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.
ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುಮಾರು ನಾಲ್ಕು ಕಿ.ಮೀ. ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದರು. ಇದನ್ನೂ ಓದಿ: ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್
Advertisement
Advertisement
ಈ ವಿಚಾರವಾಗಿ ಗೋವಿಂದ ಕಾರಜೋಳ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದೆ. ನನಗೆ ಕಳವಳ ಆಗಿದೆ. ಸಿದ್ದರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ. ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು ಎಂದು ವ್ಯಂಗ್ಯಭರಿತ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭದ್ರತೆ ವಿಚಾರದಲ್ಲಿ ಅವರಿಗೇಕೆ ಮಾಹಿತಿ ನೀಡಬೇಕು? – ಚರಣ್‍ಜಿತ್ ಸಿಂಗ್ ಚನ್ನಿ ವಿರುದ್ಧ ಬಿಜೆಪಿ ಕಿಡಿ
Advertisement
ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ.ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು.@siddaramaiah @BJP4Karnataka
— Govind M Karjol (@GovindKarjol) January 9, 2022
Advertisement
ಮತ್ತೊಂದೆಡೆ ಬಿಜೆಪಿ, ಕಾಂಗ್ರೆಸ್ಸಿಗರೇ ನಿಮ್ಮದು ಬೆಂಗಳೂರಿಗೆ ನೀರು ಕೊಡುವ ಯಾತ್ರೆಯೋ ಅಥವಾ ಬೆಂಗಳೂರಿಗರಿಗೆ ಕೊರೊನಾ ಹಬ್ಬಿಸುವ ಜಾತ್ರೆಯೋ? ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜ್ವರದ ಲಕ್ಷಣದಿಂದ ಪಾದಯಾತ್ರೆಯಿಂದ ಹಿಂದೆ ಸರಿದಿದ್ದಾರೆ. ಇನ್ನೆಷ್ಟು ಜನರಿಗೆ ಕೋವಿಡ್ ಹಬ್ಬಿಸುವ ಯೋಜನೆ ಹಾಕಿಕೊಂಡಿದ್ದೀರಿ ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ಸಿಗರೇ,
ನಿಮ್ಮದು ಬೆಂಗಳೂರಿಗೆ ನೀರು ಕೊಡುವ ಯಾತ್ರೆಯೋ ಅಥವಾ ಬೆಂಗಳೂರಿಗರಿಗೆ ಕೊರೋನ ಹಬ್ಬಿಸುವ ಜಾತ್ರೆಯೋ!?
ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜ್ವರದ ಲಕ್ಷಣದಿಂದ ಪಾದಯಾತ್ರೆಯಿಂದ ಹಿಂದೆ ಸರಿದಿದ್ದಾರೆ.
ಇನ್ನೆಷ್ಟು ಜನರಿಗೆ ಕೋವಿಡ್ ಹಬ್ಬಿಸುವ ಯೋಜನೆ ಹಾಕಿಕೊಂಡಿದ್ದೀರಿ?#ಸುಳ್ಳಿನಜಾತ್ರೆ #ಕೋವಿಡ್‌ಯಾತ್ರೆ pic.twitter.com/yAv24H6qsE
— BJP Karnataka (@BJP4Karnataka) January 9, 2022
ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಇಂದು ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರು ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡರು. ಎರಡು ದಿನದ ಹಿಂದೆಯಷ್ಟೇ ಬೂಸ್ಟರ್ ಡೋಸ್ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಈ ವೇಳೆ ಸುಸ್ತು ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 2ನೇ ದಿನದ ವೀಕೆಂಡ್ ಕರ್ಫ್ಯೂ ಬಹುತೇಕ ಯಶಸ್ವಿ
Siddaramaiah, Govinda Karajola, BJP Tweet, Bengaluru