Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

Bengaluru City

ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

Public TV
Last updated: June 30, 2022 1:32 pm
Public TV
Share
4 Min Read
SIDDARAMAIAH
SHARE

ಬೆಂಗಳೂರು: ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆ ಅವರ ಅಭಿಮಾನಿಗಳು, ಬೆಂಬಲಿಗರು ದಾವಣಗೆರೆಯಲ್ಲಿ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ದೆಹಲಿಯಲ್ಲಿ ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಆಹ್ವಾನಿಸಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಕೂಡ ಒಪ್ಪಿಗೆ ಸೂಚಿಸಿರುವುದಾಗಿ ನಾಯಕರು ತಿಳಿಸಿದ್ದಾರೆ. ಅಲ್ಲದೇ ಆಗಸ್ಟ್ 3ರಂದು ಸಿದ್ದರಾಮೋತ್ಸವ ಕಾರ್ಯಕ್ರಮವಿದೆ.

siddaramai rahul gandhi

ಈ ನಡುವೆ ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಪದವಿಯ ಆಸೆಗಾಗಿ ಸಿದ್ದರಾಮಯ್ಯ ತಮ್ಮ ಹಳೆಯ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ. ಅಹಿಂದ ಕಾರ್ಡ್ ಎಕ್ಸ್‍ಪೈರ್ ಆಗಿದೆ. ಕಳೆದ ಬಾರಿ ಇದೇ ಕಾರ್ಡ್ ತೋರಿಸಿ ಮೋಸ ಮಾಡಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಟೀಕಿಸಿದೆ. ಇದನ್ನೂ ಓದಿ: 130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ

tweet 2

ನಕಲಿ ಗಾಂಧಿ ಕುಟುಂಬಸ್ಥರು ಪ್ರತಿಬಾರಿಯೂ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದಾಗಿರಬೇಕೆಂದು ಸೂಚನೆ ನೀಡುತ್ತಾರೆ. ದೆಹಲಿಯಲ್ಲಿ ಹೂಂಗುಟ್ಟಿ ಬರುವ ಕಾಂಗ್ರೆಸ್ಸಿಗರು ಬೆಂಗಳೂರಿಗೆ ಬಂದ ಕೂಡಲೇ ಒಬ್ಬರ ವಿರುದ್ಧ ಇನ್ನೊಬ್ಬರು ಕತ್ತಿ ಮಸೆಯುತ್ತಾರೆ. ತಾಳಮೇಳ ಇಲ್ಲದ ಕೈ ನಾಯಕರಿಂದಾಗಿಯೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

ನಕಲಿ ಗಾಂಧಿ ಕುಟುಂಬಸ್ಥರು ಪ್ರತಿಬಾರಿಯೂ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಒಂದಾಗಿರಬೇಕೆಂದು ಸೂಚನೆ ನೀಡುತ್ತಾರೆ.

ದೆಹಲಿಯಲ್ಲಿ ಹೂಂಗುಟ್ಟಿ ಬರುವ ಕಾಂಗ್ರೆಸ್ಸಿಗರು ಬೆಂಗಳೂರಿಗೆ ಬಂದ ಕೂಡಲೇ ಒಬ್ಬರ ವಿರುದ್ಧ ಇನ್ನೊಬ್ಬರು ಕತ್ತಿ ಮಸೆಯುತ್ತಾರೆ.

ತಾಳಮೇಳ ಇಲ್ಲದ ಕೈ ನಾಯಕರಿಂದಾಗಿಯೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ.#ಕಾಂಗ್ರೆಸ್‌ಒಳಜಗಳ

— BJP Karnataka (@BJP4Karnataka) June 30, 2022

ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲೆತ್ತಲು ಸಿದ್ದರಾಮೊತ್ಸವ ಮೂಲಕ ವೇದಿಕೆ ಸಜ್ಜುಗೊಳಿಸುತ್ತಿರುವ ಸಿದ್ದರಾಮಯ್ಯ ಬಣದ ನಾಯಕರು ಒಂದೆಡೆಯಾದರೆ, ಇದೇ ಸಿದ್ದರಾಮಯ್ಯರನ್ನು ಕೆಡವಲು ಖೆಡ್ಡಾ ತೋಡುತ್ತಿರುವ ಡಿ.ಕೆ. ಶಿವಕುಮಾರ್ ಬಣದ ನಾಯಕರು ಮತ್ತೊಂದೆಡೆ. ಈ 2 ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ ಎಂದು ಟೀಕಿಸಿದೆ.

ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲೆತ್ತಲು ಸಿದ್ದರಾಮೊತ್ಸವ ಮೂಲಕ ವೇದಿಕೆ ಸಜ್ಜುಗೊಳಿಸುತ್ತಿರುವ @siddaramaiah ಬಣದ ನಾಯಕರು ಒಂದೆಡೆಯಾದರೆ,

ಇದೇ ಸಿದ್ದರಾಮಯ್ಯರನ್ನು ಕೆಡವಲು ಖೆಡ್ಡಾ ತೋಡುತ್ತಿರುವ @DKShivakumar ಬಣದ ನಾಯಕರು ಮತ್ತೊಂದೆಡೆ.

ಈ 2 ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ!#ಕಾಂಗ್ರೆಸ್‌ಒಳಜಗಳ

— BJP Karnataka (@BJP4Karnataka) June 30, 2022

ಕಾಂಗ್ರೆಸ್ಸಿಗರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ. ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ? 2023 ರಲ್ಲಿ ಕಾಂಗ್ರೆಸ್ ಸೋಲು ಖಚಿತ. ಟವಲ್ ಈಗಲೇ ಹಾಕಬೇಡಿ, ನಾಳೆಯ ದಿನ ಮುಖಭಂಗವಾದಾಗ ಒರೆಸಿಕೊಳ್ಳಲು ತುಂಡು ಬಟ್ಟೆಯೂ ಲಭಿಸದು ವ್ಯಂಗ್ಯವಾಡಿದೆ.  ಇದನ್ನೂ ಓದಿ: ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

tweet 1

2013ರ ಸೋಲನ್ನು ಪರಮೇಶ್ವರ್ ಮರೆತಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ. ಸಿದ್ದರಾಮಯ್ಯ ಅವರೇ ನೀವು ಯಾರನ್ನೂ ಓವರ್ ಟೇಕ್ ಮಾಡಿದರೂ ಕಾಂಗ್ರೆಸ್ ಒಳಜಗಳ ನಿಮ್ಮನ್ನು ಓವರ್ ಟೇಕ್ ಮಾಡದೇ ಬಿಡದು. 2018 ರಲ್ಲಿ ಅನುಭವಿಸಿದ್ದೀರಿ, 2023 ರಲ್ಲಿ ಡಿಕೆಶಿ, ಖರ್ಗೆ, ಪರಮೇಶ್ವರ್ ಸೇರಿಕೊಂಡು ನಿಮ್ಮನ್ನು ಓವರ್ ಟೇಕ್ ಮಾಡಲಿದ್ದಾರೆ ಎಂದಿದೆ.

tweet

ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುವುದು ಎಂದರೆ ಕಪ್ಪೆಯನ್ನು ಹಿಡಿದು ತಕ್ಕಡಿಯಲ್ಲಿ ತೂಕ ಮಾಡಿದಂತೆ, ಇವರು ಒಟ್ಟಾಗುವುದಿಲ್ಲ, ಹೈಕಮಾಂಡ್ ಒಗ್ಗಟ್ಟಿನ ಜಪ ಬಿಡುವುದಿಲ್ಲ. ಕಾಂಗ್ರೆಸ್ ವರಿಷ್ಠರೀಗ ನೀರಲ್ಲಿ ಮುಳುಗಿ ಬಂದ ಬೆಕ್ಕಿನಂತಾಗಿದ್ದಾರೆ ಎಂದು ಹೇಳಿದೆ.

ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುವುದು ಎಂದರೆ ಕಪ್ಪೆಯನ್ನು ಹಿಡಿದು ತಕ್ಕಡಿಯಲ್ಲಿ ತೂಕ ಮಾಡಿದಂತೆ!

ಇವರು ಒಟ್ಟಾಗುವುದಿಲ್ಲ, ಹೈಕಮಾಂಡ್ ಒಗ್ಗಟ್ಟಿನ‌‌ ಜಪ ಬಿಡುವುದಿಲ್ಲ, ಕಾಂಗ್ರೆಸ್‌ ವರಿಷ್ಠರೀಗ ನೀರಲ್ಲಿ ಮುಳುಗಿ ಬಂದ ಬೆಕ್ಕಿನಂತಾಗಿದ್ದಾರೆ.#ಕಾಂಗ್ರೆಸ್‌ಒಳಜಗಳ

— BJP Karnataka (@BJP4Karnataka) June 30, 2022

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸಮಾವೇಶ ಆಯೋಜಿಸಿದ್ದಾರೆ ಎಂದರೆ ಬಂಡಾಯದ ಬಾವುಟ ಹಾರಿಸಿದ್ದಾರೆಂದೇ ಅರ್ಥ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಸಮಾವೇಶ ನಡೆಸಿ ವರಿಷ್ಠರಿಗೆ ಭರತನಾಟ್ಯ ಮಾಡಿಸಿದ್ದರು. ಸಿದ್ದರಾಮಯ್ಯನವರೇ, ಇದೆಲ್ಲವೂ ಸ್ವಾರ್ಥಕ್ಕಾಗಿ ಅಲ್ವೇ ಎಂದು ಪ್ರಶ್ನಿಸಿದೆ.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸಮಾವೇಶ ಆಯೋಜಿಸಿದ್ದಾರೆ ಎಂದರೆ ಬಂಡಾಯದ ಬಾವುಟ ಹಾರಿಸಿದ್ದಾರೆಂದೇ ಅರ್ಥ!

ಪರಮೇಶ್ವರ್‌ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೂ @siddaramaiah ದಾವಣಗೆರೆಯಲ್ಲಿ ಸಮಾವೇಶ ನಡೆಸಿ ವರಿಷ್ಠರಿಗೆ ಭರತನಾಟ್ಯ ಮಾಡಿಸಿದ್ದರು.

ಸಿದ್ದರಾಮಯ್ಯನವರೇ, ಇದೆಲ್ಲವೂ ಸ್ವಾರ್ಥಕ್ಕಾಗಿ ಅಲ್ವೇ?#ಕಾಂಗ್ರೆಸ್‌ಒಳಜಗಳ

— BJP Karnataka (@BJP4Karnataka) June 30, 2022

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ನಿಮಗಿದು ಎಚ್ಚರಿಕೆ. ಸಿದ್ದರಾಮೋತ್ಸವದ ಬಳಿಕ ನಿಮ್ಮ ಪರಿಸ್ಥಿತಿ ಇದೇ ರೀತಿ ಆಗಲಿದೆ ಎಂದು ತಿಳಿಸಿದೆ.

Live Tv

TAGGED:bengalurubjpsiddaramaiahtweetಟ್ವೀಟ್ಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
2 minutes ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
14 minutes ago
ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
36 minutes ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
1 hour ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
1 hour ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?