ಬಿಜೆಪಿ ಯತ್ನಾಳ್‌ರನ್ನ ಪಕ್ಷದಲ್ಲಿ ಇಟ್ಟುಕೊಂಡಿರೋದೆ ಬೊಗಳಿಸೋಕೆ: ಸಿದ್ದರಾಮಯ್ಯ

Public TV
1 Min Read
Siddaramaiah 7

ಬೆಂಗಳೂರು: ಯತ್ನಾಳ್‌ರನ್ನ (Basangouda Patil Yatnal) ಬಿಜೆಪಿ (BJP) ಪಕ್ಷದಲ್ಲಿ ಇಟ್ಟುಕೊಂಡಿರೋದೆ ಬೊಗಳಿಸೋಕೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Basangouda Patil Yatnal 1

ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಸಿಎಂ, ನಮ್ಮ ಮೇಲೆ ಆರೋಪಗಳನ್ನು ಮಾಡಲು ಯತ್ನಾಳ್ ಅವರನ್ನ ಬಿಜೆಪಿ ಇಟ್ಟುಕೊಂಡಿದೆ. ಹಿಂದೆ ಬಿಜೆಪಿ ನಾಯಕರ ವಿರುದ್ಧವೇ ಯತ್ನಾಳ್ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ಯಡಿಯೂರಪ್ಪ, ವಿಜಯೇಂದ್ರ ವಿರುದ್ಧನೂ ಯತ್ನಾಳ್ ಆರೋಪ ಮಾಡಿದ್ದರು. ಆದರೆ ಬಿಜೆಪಿ ಏನು ಕ್ರಮ ತೆಗೆದುಕೊಂಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡ್ರಗ್ಸ್ ಹಾವಳಿ ತಡೆಗೆ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ: ಸಿಎಂ ಘೋಷಣೆ

ಇದೇ ವೇಳೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಬಗ್ಗೆ ಪ್ರಸ್ತಾಪ ಮಾಡಿದ ಸಿಎಂ, ಸಂವಿಧಾನ ಬದಲಾವಣೆ ಮಾಡೋಕೆ ನಾವು ಬಂದಿದ್ದೇವೆ ಅಂತ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದ್ದರು. ಆದರೂ ಯಾವುದೇ ಕ್ರಮ ಬಿಜೆಪಿ ತೆಗೆದುಕೊಂಡಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಜಾಮೀನು ಭವಿಷ್ಯ ಗುರುವಾರ ನಿರ್ಧಾರ: ಅಟ್ರಾಸಿಟಿ ಕಾಯ್ದೆ ಅನ್ವಯವಾಗಲ್ಲ – ಮುನಿರತ್ನ ವಕೀಲರ ವಾದ ಏನು?

Share This Article