ಕೆಪಿಎಸ್‌ಸಿ ಕರ್ಮಕಾಂಡದ ರೂವಾರಿ, ಬೇಕಾದವರಿಗೆ ಸರ್ಕಾರಿ ಹುದ್ದೆ – ಬಿಜೆಪಿ ಕಿಡಿ

Public TV
1 Min Read
H.D.Kumaraswamy BJP e1634551476784

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಕೆಪಿಎಸ್‌ಸಿಯನ್ನು ದುರ್ಬಳಕೆ ಮಾಡಿ ಬೇಕಾದವರಿಗೆ ಉದ್ಯೋಗ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಆರ್‌ಎಸ್‌ಎಸ್‌ ಮೂಲದ ವ್ಯಕ್ತಿಗಳನ್ನೇ ಸರ್ಕಾರ ಅಧಿಕಾರಿಗಳನ್ನಾಗಿ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಆರೋಪಗಳಿಗೆ ಬಿಜೆಪಿ ಇಂದು ಸರಣಿ ಟ್ವೀಟ್‌ ಮಾಡಿ ತಿರುಗೇಟು ನೀಡಿದೆ.

RSS

ಟ್ವೀಟ್‌ನಲ್ಲಿ ಏನಿದೆ?
ಘಾತುಕತನವನು ಬಿಡದೆ ನಿರಂತರ ಗೀತೆಯನೋದಿದೊಡೇನು ಫಲ? ಪುರಂದರ ದಾಸರ ಈ ಪದ್ಯದ ಸಾಲು ಕುಮಾರಸ್ವಾಮಿ ಅವರಿಗೆ ಅಕ್ಷರಶಃ ಅನ್ವಯವಾಗುತ್ತದೆ.ನಿಮ್ಮ ತಪ್ಪು, ವೈರುಧ್ಯ, ಸಮಯಸಾಧಕತನವನ್ನು ಅನ್ಯರ ನಿಂದನೆಯ ಮೂಲಕ ಮುಚ್ಚಿಕೊಳ್ಳಲು ಸಾಧ್ಯವೇ? ಕಾಗೆ ಗಂಗಾ ಸ್ನಾನ ಮಾಡಿದರೆ ಬಿಳುಪಾಗುವುದೇ ಕುಮಾರಸ್ವಾಮಿ? ಇದನ್ನೂ ಓದಿ: 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

ಕುಮಾರಸ್ವಾಮಿ ಅವರೇ, ʼವೃದ್ಧನಾರಿ ಪತಿವ್ರತಾʼ ಎಂಬ ಮಾತು ಗೊತ್ತೇ? ನಿಮ್ಮ ಸ್ಥಿತಿಯೂ ಹಾಗಾಗಿದೆ. ಅವಕಾಶ ಸಿಕ್ಕಾಗಲೆಲ್ಲ ಗುಟ್ಟಿನಲ್ಲಿ ತಪ್ಪು ಮಾಡುವುದು ಬಳಿಕ ಗರತಿಯ ಸೋಗು ಹಾಕುವುದು ನಿಮ್ಮ ಹಳೇ ಚಾಳಿ. ಕೆಪಿಎಸ್‌ಸಿ ಕರ್ಮಕಾಂಡದ ರೂವಾರಿಯಾಗಿರುವ ನೀವು ಈಗ ಊರಿಗೆ ಉಪದೇಶ ಕೊಡುವಂತಾಗಿರುವುದೇ ಕಾಲದ ಚೋದ್ಯ.

ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ತಮಗೆ ಬೇಕಾದವರಿಗೆ ಸರ್ಕಾರಿ ಹುದ್ದೆ ಕೊಡಿಸಿದ್ದು ಕನ್ನಡಿಗರಿಗೆ ಮಾಡಿದ ಮೋಸವಲ್ಲವೇ? ಇದರಿಂದಲೇ‌ ನಿಮ್ಮ ಸ್ವಜನ ‘ಪಕ್ಷ’ಪಾತ ಧೋರಣೆ ಅನಾವರಣವಾಗಿದೆ. ಸರ್ಕಾರಿ ಕೆಲಸ ನೀಡುವಲ್ಲಿಯೂ ಅಕ್ರಮ ಮಾಡಿದ ನೀವು ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು.

ತಮಗೆ ಬೇಕಾದ ವ್ಯಕ್ತಿಯ ಕುಟುಂಬದವರಿಗೆ ಎಚ್.ಎನ್.ಕೃಷ್ಣ ಮೂಲಕ ಕ್ಲಾಸ್ ಒನ್ ಅಧಿಕಾರಿ ಹುದ್ದೆ ಕೊಡಿಸಿದ್ದೆ ಎಂಬ ನಿಮ್ಮ ಹೇಳಿಕೆಗೆ ರಾಜ್ಯವೇ ಸಾಕ್ಷಿಯಾಗಿದೆ. ಹಾಗಾದರೆ ಸಂವಿಧಾನಬದ್ಧ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಯಾರು? ಕುಮಾರಸ್ವಾಮಿಯೋ ಅಥವಾ ಸಾಮಾಜಿಕ ಸಂಘಟನೆಯೋ?

Share This Article
Leave a Comment

Leave a Reply

Your email address will not be published. Required fields are marked *