ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬೇಸತ್ತಿದ್ದಾರೆ – ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿ

Public TV
1 Min Read
DK SHIVAKUMAR

ಬೆಂಗಳೂರು: ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾರ್ಯಕರ್ತರೇ ಬೇಸತ್ತಿದ್ದಾರೆ. ಈಗ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕೆ ದುಡಿದವರು ಪಕ್ಷ ತ್ಯಜಿಸುತ್ತಿದ್ದಾರೆ. ರಾಜಸ್ಥಾನದ ಚಿಂತನ ಶಿಬಿರದ ಬಳಿಕ ಕಾಂಗ್ರೆಸ್ ಖಾಲಿಯಾಗುತ್ತಿದೆ ಎಂದು ಕಾಂಗ್ರೆಸ್‍ನ ಆಂತರಿಕ ಕಚ್ಚಾಟಕ್ಕೆ ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿದೆ.

CONGRESS 1

ಟ್ವೀಟ್‍ನಲ್ಲಿ ಏನಿದೆ?
ಕೆಪಿಸಿಸಿ ಅಧ್ಯಕ್ಷರೇ, ನಿಮ್ಮ ಭಾರತ್ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ ಹೇಗಿದೆ? ಅಭಿಯಾನದ ಮೂಲಕ ಕಾಂಗ್ರೆಸ್ ಸೇರಿದವರ ಸಂಖ್ಯೆ ಹೆಚ್ಚೋ? ಅಥವಾ ಕಾಂಗ್ರೆಸ್ ತ್ಯಜಿಸಲಿರುವವರ ಸಂಖ್ಯೆ ಹೆಚ್ಚೋ? ಕಪಿಲ್ ಸಿಬಲ್, ಆರ್.ಪಿಎನ್ ಸಿಂಗ್, ಅಶ್ವಿನಿ ಕುಮಾರ್, ಹಾರ್ದಿಕ್ ಪಟೇಲ್, ಸಿಎಂ ಇಬ್ರಾಹಿಂ, ಪ್ರಮೋದ್ ಮಧ್ವರಾಜ್, ಮುಖ್ಯಮಂತ್ರಿ ಚಂದ್ರು ಈಗ ಬ್ರಿಜೇಶ್ ಕಾಳಪ್ಪ! ಇದನ್ನೂ ಓದಿ: ಬಸವಣ್ಣನ ಪಠ್ಯವನ್ನೇ ತಿರುಚಲಾಗಿದೆ: ಲಿಂಗಾಯತ ಸ್ವಾಮೀಜಿಗಳು ಅಸಮಾಧಾನ

ಕಾಂಗ್ರೆಸ್ಸಿಗರೇ, ನಿಮ್ಮದು ಭಾರತ್ ಜೋಡೋ ಅಭಿಯಾನವೋ? ಕಾಂಗ್ರೆಸ್ ಪಕ್ಷ ಯಾವ ದಯನೀಯ ಸ್ಥಿತಿ ತಲುಪಿದೆ ಎಂದರೆ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಸಂಖ್ಯೆ ತೋರಿಸಲು ಟಿವಿ, ಫ್ರಿಡ್ಜ್, ಫೋನ್ ಆಮಿಷ ಒಡ್ಡಲಾಗಿತ್ತು. ಈಗ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕೆ ದುಡಿದವರು ಪಕ್ಷ ತ್ಯಜಿಸುತ್ತಿದ್ದಾರೆ. ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾರ್ಯಕರ್ತರೇ ಬೇಸತ್ತಿದ್ದಾರೆ! ರಾಜಸ್ಥಾನದ ಚಿಂತನ ಶಿಬಿರದ ಬಳಿಕ ಕಾಂಗ್ರೆಸ್ ಖಾಲಿಯಾಗುತ್ತಿದೆ. ಜಿ 23 ಗುಂಪಿನ ಸಂಖ್ಯೆ ಕರಗುತ್ತಿದೆ. ಕಾರಣ ಸ್ಪಷ್ಟ, ನಕಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕಾಂಗ್ರೆಸ್ ಕಾರ್ಯಕರ್ತರೇ ಒಪ್ಪುತ್ತಿಲ್ಲ.

ರಾಜ್ಯದಲ್ಲೂ ಕಾಂಗ್ರೆಸ್ ಚಿಂತನಾ ಶಿಬಿರ ಹಮ್ಮಿಕೊಂಡಿದೆ. ಅದರ ಮುನ್ನವೇ ರಾಜೀನಾಮೆ ಪರ್ವ ಆರಂಭಗೊಂಡಿದೆ. ಪರಿಷತ್ ಟಿಕೆಟ್, ರಾಜ್ಯಸಭಾ ಟಿಕೆಟ್, ಪದಾಧಿಕಾರಿಗಳ ಪಟ್ಟಿ ಹೀಗೆ ಪಕ್ಷದ ವಿಚಾರದಲ್ಲಿ ಸಿದ್ದರಾಮಯ್ಯ ಛಾಪು ಎದ್ದು ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಬಣದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿ ಮುಂದೊಂದು ದಿನ ಕಾಂಗ್ರೆಸ್ ತ್ಯಜಿಸಬಹುದಾದ ದಿನ ದೂರವೇನು ಇಲ್ಲ. ಎಚ್ಚರ ಡಿಕೆಶಿ ಎಚ್ಚರ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಆಕ್ಸ್ ಫರ್ಡ್ ಯೂನಿವರ್ಸಿಟಿಯಲ್ಲಿ ಅವಮಾನ

Share This Article
Leave a Comment

Leave a Reply

Your email address will not be published. Required fields are marked *