ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಎಂಬ ಕಾಂಗ್ರೆಸ್ ಟೀಕೆಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದೆ.
Advertisement
ಟ್ವೀಟ್‍ನಲ್ಲಿ ಏನಿದೆ:
ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ? ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಸಿಂಕ್ ಆಗದೇ ಒದ್ದಾಡುತ್ತಿದ್ದಾಗ “ಬಿದ್ದು ಹೋಗುವುದಕ್ಕೆ ಇದೇನು ಒಣ ಮರವಲ್ಲ” ಎಂದು ಡಿಕೆಶಿ ಅಬ್ಬರಿಸುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಸಾಧ್ಯವಾಗದೇ ಈಗ ಡಿ.ಕೆ ಶಿವಕುಮಾರ್ ಅವರು ಬಿದ್ದು ಹೋಗುವ ಒಣ ಮರದಂತಾಗಿದ್ದಾರೆ. ಇದನ್ನೂ ಓದಿ: ಮೋದಿಜಿಯವರ ಡಿಜಿಟಲ್ ಇಂಡಿಯಾ ಎಫೆಕ್ಟ್ – ರಾಜ್ಯದ ಪರೀಕ್ಷೆಗಳಲ್ಲಿ ಬ್ಲೂಟೂತ್, ಸ್ಮಾರ್ಟ್ ವಾಚ್‍ಗಳದ್ದೇ ಕಾರುಬಾರು: ಕಾಂಗ್ರೆಸ್
Advertisement
ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು.
ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ.
ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ?#DoubleSteeringCongress pic.twitter.com/hCTdutJUer
— BJP Karnataka (@BJP4Karnataka) August 11, 2022
Advertisement
ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬಂದರು ಎಂಬ ಕಾರಣಕ್ಕೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಡಿಕೆಶಿ ಆಹ್ವಾನಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ ಆರಂಭಗೊಂಡಿದೆ. ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್ ಹತ್ಯೆಗೆ ಸ್ಕೆಚ್ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್