ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ನಾಯಕ ಅನುಪಮ್ ಹಜ್ರಾ (Anupam Hazra) ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತೆಸೆಯಲಾಗಿದೆ.
ಲೋಕಸಭೆಯ (Loksabha) ಮಾಜಿ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಕೆಲವು ಸಮಯದಿಂದ ಟೀಕಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕಿದ್ದಾರೆ.
Advertisement
Advertisement
ಗೃಹ ಸಚಿವ ಅಮಿತ್ ಶಾ (AmitShah) ಮತ್ತು ಜೆ.ಪಿ ನಡ್ಡಾ (JP Nadda) ಅವರು ರಾಜಕೀಯ ಕಾರ್ಯಕ್ರಮಗಳಿಗಾಗಿ ಕೋಲ್ಕತ್ತಾಗೆ ಆಗಮಿಸಿದ್ದ ಸಂದರ್ಭದಲ್ಲಿ ಚರ್ಚಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಇದನ್ನೂ ಓದಿ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್- ಜಿಲ್ಲಾಡಳಿತದ ಆದೇಶವೇನು?
Advertisement
ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಪಕ್ಷದೊಳಗಿನ ಭಿನ್ನಮತೀಯರಿಗೆ ಶಿಸ್ತು ಪಾಲಿಸುವಂತೆ ಹಾಗೂ ನಾಯಕತ್ವವನ್ನು ನಿಷ್ಠೆಯಿಂದ ಅನುಸರಿಸುವಂತೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎನ್ನಲಾಗಿದೆ.