CrimeLatestLeading NewsMain PostNational

ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಟ್ವೀಟ್ – ಬಿಜೆಪಿ ಮುಖಂಡ ಅರೆಸ್ಟ್

Advertisements

ಲಕ್ನೋ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿದ್ದ ಉತ್ತರ ಪ್ರದೇಶದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಕಾನ್ಪುರದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರ್ಷಿತ್ ಶ್ರೀವಾಸ್ತವನನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಕಾನ್ಪುರದಲ್ಲಿ ಕೋಮುಗಲಭೆ ನಡೆದ ನಾಲ್ಕು ದಿನಗಳ ಬಳಿಕ ಈ ಘಟನೆ ನಡೆದಿದೆ. ಹರ್ಷಿತ್ ಮಾಡಿದ್ದ ಟ್ವೀಟ್‌ನಿಂದಾಗಿ ಇನ್ನಷ್ಟು ಗೊಂದಲದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇತ್ತು. ಹರ್ಷಿತ್ ಅವರ ಟ್ವೀಟ್ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯೋನ್ಮುಖರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಜೆಪಿಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಜ್ಞಾನವಾಪಿ ಮಸೀದಿ ಕುರಿತು ನಡೆಯುತ್ತಿದ್ದ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆ ರಾಷ್ಟ್ರವ್ಯಾಪಿಯಾಗಿ ವಿವಾದ ಹರಡಿತ್ತು. ಅದೇ ವಿಚಾರವಾಗಿ ಕಾನ್ಪುರದಲ್ಲೂ ಹಿಂಸಾಚಾರ ನಡೆದಿತ್ತು. ಹಲವು ರಾಷ್ಟ್ರಗಳಿಂದ ಖಂಡನೆಯೂ ವ್ಯಕ್ತವಾಗಿದ್ದು, ಇಂಡೋನೇಷ್ಯಾ ಸರ್ಕಾರದಿಂದ ಭಾರತದ ರಾಯಭಾರಿಗೆ ಸಮನ್ಸ್ ಸಹ ನೀಡಲಾಗಿದೆ. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ 

ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ಸಮಯದಲ್ಲೇ ಕಾನ್ಪುರದಲ್ಲಿ ಹಿಂಸಾಚಾರ ನಡೆದಿತ್ತು. ಗಲಭೆಗೆ ಸಂಬಂಧಿಸಿದಂತೆ ಕನಿಷ್ಠ 50 ಜನರನ್ನು ಬಂಧಿಸಲಾಗಿದ್ದು, ಸುಮಾರು 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

ಈ ಬೆನ್ನಲ್ಲೇ ಹರ್ಷಿತ್ ಟ್ವೀಟ್ ಉತ್ತರ ಪ್ರದೇಶ ಸರ್ಕಾರದ ನಿದ್ದೆಗೆಡಿಸುವಂತೆ ಮಾಡಿದೆ. ಸದ್ಯ ಆತನ ವಿರುದ್ಧ ಕರ್ನೈಲ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಟ್ವೀಟ್ ಅನ್ನು ಅಳಿಸಿ ಹಾಕಲಾಗಿದೆ.

Leave a Reply

Your email address will not be published.

Back to top button