ಬೆಳಗಾವಿ: ತಲ್ವಾರ್ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದಕ್ಕೆ ಬೆಳಗಾವಿಯ ಬಿಜೆಪಿ ಮುಖಂಡ ನಿಖಿಲ್ ಮುರ್ಕುಟೆಯನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.
ನಿಖಿಲ್ ಮುರ್ಕುಟೆ ಬೆಳಗಾವಿ ಮಹಾನಗರ ಬಿಜೆಪಿ ಯುವ ಮೋರ್ಚಾ ಘಟಕದ ಅಧ್ಯಕ್ಷನಾಗಿದ್ದಾನೆ. ಫೆ.1 ರಂದು ಬೆಳಗಾವಿಯ ಗಾಂಧಿನಗರದಲ್ಲಿ ಬರ್ತ್ ಡೇ ಪಾರ್ಟಿ ನಡೆದಿತ್ತು. ನಿಖಿಲ್ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಹಾಗೂ ಮಾಜಿ ಶಾಸಕ ಸಂಜಯ್ ಪಾಟೀಲ್ ಆಗಮಿಸಿದ್ದರು.
Advertisement
Advertisement
ಬೆಳಗಾವಿ ಮಾಳಮಾರುತಿ ಪೊಲೀಸರು ತಡರಾತ್ರಿ ಕಾರ್ಯಚರಣೆ ನಡೆಸಿ ನಿಖಿಲ್ ಮುರ್ಕುಟೆನನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.
Advertisement
ಹುಬ್ಬಳ್ಳಿ, ವಿಜಯಪುರ ನಂತರ ಬೆಳಗಾವಿಯಲ್ಲೂ ಈ ಪ್ರಕರಣ ಮುಂದುವರಿದಿದೆ. ಇಲ್ಲಿಯವರೆಗೂ ಪುಡಿ ರೌಡಿಗಳು ತಲ್ವಾರ್ ನಿಂದ ಕೇಕ್ ಕಟ್ ಮಾಡುತ್ತಿದ್ದರು. ಆದರೆ ಈಗ ಬಿಜೆಪಿ ಪಕ್ಷದ ಮುಖಂಡ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv