– ಅಪ್ಪ ಮಕ್ಕಳು ಬುರುಡೆ ಬಿಡ್ತಿದ್ದಾರೆ
– ಎಚ್‍ಡಿಡಿ, ಎಚ್‍ಡಿಕೆ ವಿರುದ್ಧ ಕಿಡಿ
ಬೆಂಗಳೂರು: ದಲಿತ ಸಂಸದರನ್ನು ಕೇಂದ್ರ ಸಚಿವರನ್ನಾಗಿ ಮಾಡುವ ಜವಾಬ್ದಾರಿ ನಮ್ಮದು, ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ 25 ಸಂಸದರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಳಕ್ಕೆ ಏಳು ಮೀಸಲು ಕ್ಷೇತ್ರವನ್ನು ಗೆದ್ದರೂ ಒಬ್ಬರನ್ನೂ ಮಂತ್ರಿ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕರಿಬ್ಬರು ಹೇಳಿದ್ದಾರೆ. ಕೇಂದ್ರದಲ್ಲಿ ದಲಿತ ಮುಖಂಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ ನಿಮಗೆ ತಾಕತ್ತಿದ್ದರೆ ದಲಿತ ಸಿಎಂ ಮಾಡಿ ತೋರಿಸಿ ಎಂದು ಸವಾಲೆಸೆದರು.
Advertisement
Advertisement
ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಶ್ರಮಿಸಬೇಕಾಗಿದೆ. ರಾಜ್ಯದಲ್ಲಿ ಬರ ಇದೆ. ಇದರ ಬಗ್ಗೆ ಅಧ್ಯಯನ ಮಾಡುವುದನ್ನು ಬಿಟ್ಟು ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
Advertisement
ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಯಲ್ಲಿ ಭೂಮಿಯನ್ನು ಲೀಸ್ ನೀಡಿದ್ದಾರೆ. ಅದರ ಬಗ್ಗೆ ಯಾವ ರೀತಿ ಹೋರಾಟ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಅಪ್ಪ ಮಕ್ಕಳು ಬುರುಡೆ ಬಿಡುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
Advertisement
ರಾಜ್ಯದ ಮತದಾರರು ಜಾಗೃತರಾಗಿದ್ದಾರೆ. ಕಾಂಗ್ರೆಸ್-ಜೆಡಿಎಸ್‍ನವರ ಬುಡುಬುಡಿಕೆ ನಾಟಕವನ್ನು ಜನರು ಒಪ್ಪುವುದಿಲ್ಲ. ಬರಗಾಲವನ್ನು ನೋಡಲು ಇಷ್ಟವಿಲ್ಲದ ಮುಖ್ಯಮಂತ್ರಿಗಳು ಫೈವ್ ಸ್ಟಾರ್ ಹೋಟೆಲ್‍ನಲ್ಲಿ ಇದ್ದು ಈಗ ಶಾಲೆಗೆ ಹೋಗಿ ವಾಸ್ತವ್ಯ ಹೂಡುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿದ ಗ್ರಾಮಗಳ ಅಭಿವೃದ್ಧಿಯಾಗಿದೇಯಾ? ಆ ಗ್ರಾಮಗಳ ಅಭಿವೃದ್ಧಿಗೆ ಹಣ ಕೊಡುವುದಾಗಿ ಬುರುಡೆ ಬಿಟ್ಟರಲ್ಲ ಅದು ಆಗಿದೆಯಾ? ಈ ಸುಳ್ಳಿನ ಕಾರಣಕ್ಕೆ ಅವರ ಅಪ್ಪ, ಮಗ ಇಬ್ಬರೂ ಸೋತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರು ಮಾತನಾಡಿ, ನರೇಂದ್ರ ಮೋದಿಯವರು ಜೀವಂತವಾಗಿ ಇರವುವರೆಗೂ ಅವರೇ ಪ್ರದಾನಿ ಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈ ದೇಶದ ಗೌರವಕ್ಕಾಗಿ ಮೋದಿ ಆಯ್ಕೆಯಾಗಿದ್ದಾರೆ. ನಾವು ನಮ್ಮ ಸಂಸ್ಕøತಿ ಉಳಿಸಬೇಕಾಗಿದೆ. ಯಾರು ಜಾತಿ ಲಾಬಿ ಮಾಡಿದರೋ ಅವರು ಸೋತರು. ಒಕ್ಕಲಿಗರು ನಮ್ಮ ಜೊತೆ ಇದ್ದಾರೆ, ಕುರುಬರು ನಮ್ಮ ಜೊತೆ ಇದ್ದಾರೆ ಎಂದವರು ಹೇಳಲಿಕ್ಕೆ ಹೆಸರಿಲ್ಲದಂತೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಇರುವ ಸರ್ಕಾರ ಜನ ವಿರೋಧಿ ಸರ್ಕಾರ. ಇವರಿಗೆ ಜನಾದೇಶ ಸಿಕ್ಕಿಲ್ಲ. ಈ ಘಠಬಂಧನ ಸರ್ಕಾರವನ್ನು ಜನ ತಿರಸ್ಕರಿಸಿದ್ದಾರೆ. ಇಲ್ಲಿ ಆಪರೇಷನ್ ಕಮಲ ಮಾಡುವ ಅವಶ್ಯಕತೆ ಇಲ್ಲ. ಜನರೇ ಆಪರೇಷನ್ ಮಾಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ ರಾವ್ ಹೇಳಿದರು.