ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ (C.T.Ravi) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು. ಇದನ್ನೂ ಓದಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಆರೋಪ – ಸಿ.ಟಿ ರವಿ ವಿರುದ್ಧ ಎಫ್‌ಐಆರ್
ಸುವರ್ಣಸೌಧದ ಬಳಿ ತನ್ನ ಮೇಲೆ ಹಲ್ಲೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಿ.ಟಿ.ರವಿ ಆಕ್ರೋಶ ಹೊರಹಾಕಿದರು. ಬಿಜೆಪಿ ನಾಯಕರೆಲ್ಲರೂ ಸೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಹಲ್ಲೆ ಮಾಡಲು ಬಂದವರು ಗೂಂಡಾಗಳು ಎಂದು ಅಸಮಾಧಾನ ಹೊರಹಾಕಿದರು.
ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಖಾನಾಪುರ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸುವರ್ಣ ಸೌಧದಲ್ಲಿ ಹೈಡ್ರಾಮಾ – ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ, ಏಕವಚನದಲ್ಲೇ ಆವಾಜ್!