ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ.
ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.
Advertisement
Advertisement
ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ ಮಂಟಪಗಳಿಗೆ ತೆರಳಿ ಸಾವರ್ಕರ್ ಭಾವಚಿತ್ರ ವಿತರಿಸಲಾಗಿದೆ. ಇಂದು ರಾತ್ರಿ ವೇಳೆ ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ 378 ಗಣೇಶ ವಿಗ್ರಹಗಳು ಪ್ರತಿಷ್ಠಾಪನೆಗೊಳ್ಳಲಿವೆ. ಕೋವಿಡ್ ಹಿನ್ನೆಲೆ ಎರಡು ವರ್ಷ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಈ ಬಾರಿ ಗಣೇಶೋತ್ಸವ ಸಾವರ್ಕರ್ ಗಣೇಶ ಉತ್ಸವವನ್ನಾಗಿ ಆಚರಿಸಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ. ಇದನ್ನೂ ಓದಿ: ನಮ್ಮ ಭಾವನೆಗಳನ್ನು ವಿರೋಧಿಸಿದವರಿಗೆ ಕಪಾಳಮೋಕ್ಷವಾಗಿದೆ: ಮುತಾಲಿಕ್
Advertisement
Advertisement
ಹಿಂದೂಪರ ಸಂಘಟನೆಗಳಿಗೆ ಸ್ಥಳೀಯ ಬಿಜೆಪಿ ಶಾಸಕರು, ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಗಣೇಶೋತ್ಸವಕ್ಕಿದೆ ತನ್ನದೇ ಆದ ಇತಿಹಾಸ ಇದ್ದು, 1905ರಲ್ಲಿ ಖುದ್ದು ಬಾಲಗಂಗಾಧರ ತಿಲಕ್‍ರಿಂದ ಬೆಳಗಾವಿಯಲ್ಲಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಪ್ರತಿ ವರ್ಷ 11 ದಿನಗಳ ಕಾಲ ನಡೆಯುವ ಅದ್ಧೂರಿ ಗಣೇಶೋತ್ಸವ ನಡೆಯುತ್ತಾ ಬಂದಿದೆ.