ಹುಬ್ಬಳ್ಳಿ: ಖಾಸಗಿ ವೈದ್ಯರ ಮುಷ್ಕರಕ್ಕೆ ಜನರ ಜೀವ ಬಲಿಯಾಗುವ ಘಟನೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಮುಖಂಡ ಚನ್ನು ಹಳಿಯಾಳ ಎಂಬವರು ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ.
ಹೃದಯಾಘಾತಕ್ಕೆ ಒಳಗಾದ ಚನ್ನು ಹಳಿಯಾಳ ಅವರನ್ನು ಗೋಕುಲ್ ರಸ್ತೆಯಲ್ಲಿರುವ ಸುಚಿರಾಯು ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು. ಆದ್ರೆ ಮುಷ್ಕರದ ಹಿನ್ನೆಲೆ ಸುಚಿರಾಯು ಆಸ್ಪತ್ರೆಯ ಸಿಬ್ಬಂದಿ ಚನ್ನು ಅವರನ್ನು ದಾಖಲಿಸಿಕೊಳ್ಳಲಿಲ್ಲ. ಹೀಗಾಗಿ ಕಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಚನ್ನು ಹಳಿಯಾಳ ಮೃತಪಟ್ಟಿದ್ದಾರೆ.
ಮೃತ ಚನ್ನು ಹಳಿಯಾಳ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಪ್ತರಾಗಿದ್ದರು. ಜಗದೀಶ್ ಶೆಟ್ಟರ್ ಸ್ಪರ್ಧಿಸುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಬಿಜೆಪಿ ಪಕ್ಷ ಬಲವರ್ಧನೆ ಶ್ರಮಿಸುತ್ತಿದ್ದರು.
ಹೃದಯಾಘಾತವಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ರೈತ ಸಾವು https://t.co/3LRnQnv7Zw#Bellary #Farmer #HeartAttack #Hospital pic.twitter.com/CpxgqvKBTS
— PublicTV (@publictvnews) November 16, 2017