ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಪ್ರಧಾನಿ ದೇವೇಗೌಡ ಅವರ ಬೆನ್ನಿಗೆ ಚಾಕು ಹಿಡಿದು ನಿಂತಿದ್ದಾರೆ. ಸಿದ್ದರಾಮಯ್ಯನವರ ಬೆನ್ನಿಗೆ ಕುಮಾರಸ್ವಾಮಿ ಚಾಕು ಹಿಡಿದು ನಿಂತಿದ್ದಾರೆ. ಆದ್ರೆ ಯಾವಾಗ ಇವರು ಸಾಯುತ್ತಾರೋ ಗೊತ್ತಿಲ್ಲ ಅಂತ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಬೀಫ್ ತಿನ್ನುವ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಸಿದ್ದರಾಮಯ್ಯ ದನದ ಮಾಂಸ ತಿಂತಾರೊ, ಎಮ್ಮೆ ಮಾಂಸ ತಿಂತಾರೋ ಅವರಿಗೆ ಬಿಟ್ಟಿದ್ದು. ಆದರೆ ಮನುಷ್ಯರು ತಿನ್ನೋದನ್ನ ತಿನ್ನಲಿ ಅಂತ ಹೇಳ್ತಿನಿ ಅಂದ್ರು.
ಸಿದ್ದರಾಮಯ್ಯನವರು ದೇವೆಗೌಡರ ಬೆನ್ನಿಗೆ ಚಾಕು ಹಿಡಿದು ನಿಂತಿದ್ದಾರೆ. ಸಿದ್ದರಾಮಯ್ಯ ಬೆನ್ನಿಗೆ ಕುಮಾರಸ್ವಾಮಿ ಚಾಕು ಹಿಡಿದು ನಿಂತಿದ್ದಾರೆ. ಯಾವಾಗ ಇವರು ಸಾಯುತ್ತಾರೋ ಗೊತ್ತಿಲ್ಲ. ಸಮ್ಮಿಶ್ರ ಸರ್ಕಾರ ಮುಳುಗುತ್ತಿರುವ ಹಡಗು ಆಗಿದೆ. ಕಾಂಗ್ರೆಸ್-ಜೆಡಿಎಸ್ ನವರು ಈಜು ಬಾರದವರು. ಒಬ್ಬರಿಗೊಬ್ಬರು ತಬ್ಬಿಕೊಂಡಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆ ಮುಳುಗಿ ಹೋಗುತ್ತಾರೆ. ಇದಕ್ಕೆ ಟೆಸ್ಟ್ ಡೋಜ್ ಜಮಖಂಡಿ ಉಪಚುನಾವಣೆಯಾಗಿದೆ ಅಂತ ತಿಳಿಸಿದ್ರು.
ಕಾಂಗ್ರೆಸ್ ನವರು ಹೆಣ್ಣುಮಕ್ಕಳ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ಶೋಭಾ ಕರಂದ್ಲಾಜೆಯವರಿಗೆ ಸಿದ್ದರಾಮಯ್ಯ ಅವಳು ಅಂತಾರೆ. ನನಗೆ ಸಿದ್ದರಾಮಯ್ಯ ಅವರ ಪತ್ನಿ ತಾಯಿ ಸಮಾನ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕಾಂಗ್ರೆಸ್ ನವರು ಕಾಲ ಕಸ ಎಂದರು. ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹಗಲು-ರಾತ್ರಿ ಕನಸು ಕಾಣುತ್ತಿದ್ದಾರೆ. ಬ್ರಹ್ಮ ಬಂದರೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದಿಲ್ಲ. ಚಾಮುಂಡೇಶ್ವರಿಯಲ್ಲಿ ಜನ ಸೋಲಿಸಿ ಇವರನ್ನು ಕಿತ್ತು ಬಿಸಾಕಿದ್ದಾರೆ. ಮೈಸೂರಿನಿಂದ ಓಡಿಸಿದರು. ಓಡಿಸಿದ್ದು ಯಾರು ಅವರೇ ತಿಳಿಸಲಿ. ಸಿದ್ದರಾಮಯ್ಯ ಜಾತಿ-ಧರ್ಮ ಒಡೆದರು. ಯಡಿಯೂರಪ್ಪ ನವರನ್ನು ಸಿಎಂ ಆಗುತ್ತಾರೆಂದು ಹಗಲುಗನಸು ಕಾಣುತ್ತಿದ್ದಾರೆ ಎಂದು ಟೀಕೆ ಮಾಡುತ್ತಾರೆ. ಆದರೆ ಸಿದ್ದರಾಮಯ್ಯನವರೇ ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಬ್ಬರಿಗೊಬ್ಬರಿಗೆ ಆಗೋದಿಲ್ಲ ಅಂತ ತಿಳಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv